ಶುಕ್ರವಾರ, ಜುಲೈ 1, 2022
28 °C

ಕಾಂಗ್ರೆಸ್ ಪಾದಯಾತ್ರೆಯಿಂದ ಬಿಜೆಪಿಗೆ ಭಯ ಶುರುವಾಗಿದೆ: ಸಿದ್ದರಾಮಯ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: 'ಕಾಂಗ್ರೆಸ್ ಪಾದಯಾತ್ರೆಯಿಂದ ಬಿಜೆಪಿಗೆ ಭಯ ಶುರುವಾಗಿದೆ. ಅದೇ ಕಾರಣಕ್ಕೆ ಪಾದಯಾತ್ರೆ ತಡೆಯಲು ಏನೇನೋ ಕಸರತ್ತು ನಡೆಸುತ್ತಿದ್ದಾರೆ' ಎಂದು ಮಾಜಿ ಮುಖ್ಯಮಂತ್ರಿ, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಬುಧವಾರ ಆರೋಪಿಸಿದ್ದಾರೆ. 

'ಪಾದಯಾತ್ರೆ ಬಗ್ಗೆ ಜನರಿಗೆ ತಪ್ಪು ಮಾಹಿತಿ ನೀಡುತ್ತಿದ್ದಾರೆ. ಜನರು ಈಗಾಗಲೇ ಅವರಿಗೆ ಪಾಠ ಕಲಿಸಿದ್ದಾರೆ. ಮುಂದಿನ ಚುನಾವಣೆಗೆ ಜನರು ನಮ್ಮ ಪಕ್ಷವನ್ನ ಅಧಿಕಾರಕ್ಕೆ ತರಲಿದ್ದಾರೆ' ಎಂದು ಹೇಳಿದ್ದಾರೆ. 

ಇದನ್ನೂ ಓದಿ: 

ಈ ಸಂದರ್ಭದಲ್ಲಿ ಜೆಡಿಎಸ್ ವಿರುದ್ಧವೂ ವಾಗ್ದಾಳಿ ನಡೆಸಿದರು. 'ಜೆಡಿಎಸ್‌ನವರು ಈಗಲ್ಲ ಮೊದಲಿನಿಂದಲೂ ಒಳ ಒಪ್ಪಂದ ಮಾಡಿಕೊಂಡೇ ಬಂದಿದ್ದಾರೆ. ಬಿಜೆಪಿ ಜೊತೆ ಒಳ ಒಪ್ಪಂದ ಮಾಡಿಕೊಂಡು ಚುನಾವಣೆ ಎದುರಿಸಿದ್ದಾರೆ. ಇದೇನು ಹೊಸದಲ್ಲ ಬಿಡಿ. ಮುಂದೆ ನಮ್ಮದೇ ಪಕ್ಷ ನಿರ್ಣಾಯಕ ಸ್ಥಾನದಲ್ಲಿ ಇರಲಿದೆ' ಎಂದು ಹೇಳಿದ್ದಾರೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು