ಬೆಂಗಳೂರು: ಶಿರಾ ಮತ್ತು ರಾಜರಾಜೇಶ್ವರಿ ನಗರ ವಿಧಾನಸಭೆ ಕ್ಷೇತ್ರಗಳಿಗೆ ನಡೆಯುತ್ತಿರುವ ಉಪ ಚುನಾವಣೆಗೆ ಬಿಜೆಪಿ ಮಂಗಳವಾರ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ.

ಇತ್ತೀಚೆಗಷ್ಟೇ ಬಿಜೆಪಿ ಸೇರಿದ್ದ ರಾಜೇಶ್ ಗೌಡ ಅವರಿಗೆ ಶಿರಾ ವಿಧಾನಸಭೆ ಕ್ಷೇತ್ರದ ಟಿಕೆಟ್ ಘೋಷಣೆಯಾಗಿದ್ದರೆ, ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದ ಮಾಜಿ ಶಾಸಕ ಮುನಿರತ್ನ ಅವರಿಗೆ ರಾಜರಾಜೇಶ್ವರಿ ನಗರದಿಂದಟಿಕೆಟ್ ನೀಡಲಾಗಿದೆ.

ಪಕ್ಷದ ರಾಷ್ಟ್ರೀಯಅಧ್ಯಕ್ಷ ಜೆ.ಪಿ.ನಡ್ಡಾ ನಿರ್ದೇಶನದ ಮೇರೆಗೆ ಪಕ್ಷದ ಕೇಂದ್ರ ಚುನಾವಣೆ ಸಮಿತಿಯು ಈ ಅಭ್ಯರ್ಥಿಗಳನ್ನು ಪ್ರಕಟಿಸಿ ಆದೇಶ ಹೊರಡಿಸಿದೆ.

ಶಾಸಕ ಸತ್ಯನಾರಾಯಣ ಅವರ ನಿಧನದಿಂದಾಗಿ ಶಿರಾ ವಿಧಾನಸಭೆ ಕ್ಷೇತ್ರ ತೆರವಾಗಿತ್ತು. ಶಾಸಕ ಮುನಿರತ್ನ ಅವರ ರಾಜೀನಾಮೆಯಿಂದ ಬೆಂಗಳೂರಿನ ರಾಜರಾಜೇಶ್ವರಿ ನಗರ ಕ್ಷೇತ್ರಕ್ಕೆ ಉಪಚುನಾವಣೆ ಎದುರಾಗಿದೆ.

ಅಕ್ಟೋಬರ್ 16 ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗಿದೆ. ಅಕ್ಟೋಬರ್ 17ಕ್ಕೆ ನಾಮಪತ್ರ ಪರಿಶೀಲನೆ ನಡೆಯಲಿದೆ.

ಮತದಾನ ಪ್ರಕ್ರಿಯೆ ನವೆಂಬರ್ 3ರಂದು ನಡೆಯುವುದಾಗಿ ಕೇಂದ್ರ ಚುನಾವಣೆ ಆಯೋಗ ಘೋಷಿಸಿದೆ. ನವೆಂಬರ್ 10ರಂದು ಮತ ಎಣಿಕೆ ಕಾರ್ಯ ನಡೆಯಲಿದೆ.

ಮಾಜಿ ಸಂಸದರ ಪುತ್ರ ರಾಜೇಶ್‌ಗೌಡ

ಶಿರಾ ವಿಧಾನಸಭಾ ಕ್ಷೇತ್ರದಿಂದ ಒಂದು ಬಾರಿ ಶಾಸಕರಾಗಿ ಹಾಗೂ ಚಿತ್ರದುರ್ಗ ಲೋಕಸಭಾ ಕ್ಷೇತ್ರದಿಂದ 3 ಬಾರಿ ಸಂಸದರಾಗಿದ್ದ ಸಿ.ಪಿ.ಮೂಡಲಗಿರಿಯಪ್ಪ ಅವರ ಪುತ್ರ ಡಾ.ಸಿ.ಎಂ.ರಾಜೇಶ್ಗೌಡಅವರುಬಿಜೆಪಿಸೇರ್ಪಡೆಯಾಗಿರುವುದು ಕ್ಷೇತ್ರದಲ್ಲಿ ಮಹತ್ವದ ಬದಲಾವಣೆಗೆ ಕಾರಣವಾಗಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.