ಶನಿವಾರ, ಸೆಪ್ಟೆಂಬರ್ 25, 2021
29 °C

ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ನಾಳೆ ಬೆಳಿಗ್ಗೆಯೇ ಪ್ರಮಾಣ ವಚನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಸವರಾಜ ಬೊಮ್ಮಾಯಿ

ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಶಿಗ್ಗಾವಿ ಶಾಸಕ ಬಸವರಾಜ ಬೊಮ್ಮಾಯಿ ಆಯ್ಕೆಯಾಗಿದ್ದಾರೆ.

ಮಂಗಳವಾರ ರಾತ್ರಿ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಬೊಮ್ಮಾಯಿ ಅವರನ್ನು ಶಾಸಕಾಂಗ ಪಕ್ಷದ ನಾಯಕನನ್ನಾಗಿ ಆಯ್ಕೆ ಮಾಡಲಾಗಿದೆ. ಬುಧವಾರ ಬೆಳಿಗ್ಗೆಯೇ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಬಿಜೆಪಿ ಹೈಕಮಾಂಡ್ ವೀಕ್ಷಕರಾಗಿ ನೇಮಿಸಿದ್ದ ಕೇಂದ್ರ ಸಚಿವರಾದ ಧರ್ಮೇಂದ್ರ ಪ್ರಧಾನ್, ಕಿಶನ್ ರೆಡ್ಡಿ, ಬಿಜೆಪಿ ರಾಜ್ಯ ಘಟಕದ ಉಸ್ತುವಾರಿ ಅರುಣ್ ಸಿಂಗ್ ಉಪಸ್ಥಿಯಲ್ಲಿ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಬಸವರಾಜ ಬೊಮ್ಮಾಯಿ ಅವರನ್ನು ಅವಿರೋಧವಾಗಿ ಶಾಸಕಾಂಗ ಪಕ್ಷದ ನಾಯಕನ ಸ್ಥಾನಕ್ಕೆ ಆಯ್ಕೆ ಮಾಡಲಾಗಿದೆ.

LIVE| ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಆಯ್ಕೆ | Prajavani

ಮಾಜಿ ಮುಖ್ಯಮಂತ್ರಿ ಎಸ್.ಆರ್. ಬೊಮ್ಮಾಯಿ ಅವರ ಮಗನಾದ ಬಸವರಾಜ ಬೊಮ್ಮಾಯಿ ಜನತಾ ಪರಿವಾರದಿಂದ ರಾಜಕಾರಣ ಆರಂಭಿಸಿ ಬಿಜೆಪಿಗೆ ಬಂದವರು. ಎರಡು ಬಾರಿ ವಿಧಾನ ಪರಿಷತ್ ಸದಸ್ಯರಾಗಿದ್ದ ಬೊಮ್ಮಾಯಿ, ಮೂರು ಬಾರಿ ಶಿಗ್ಗಾವಿ ಕ್ಷೇತ್ರದ ಶಾಸಕರಾಗಿ ಆಯ್ಕೆಯಾಗಿದ್ದಾರೆ.

ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆಯಾದ ಬೊಮ್ಮಾಯಿ–ಮೊದಲ ಪ್ರತಿಕ್ರಿಯೆ

ರಾಜ್ಯದ ಜನ ಬಿಜೆಪಿ ಮೇಲೆ ವಿಶ್ವಾಸ, ನಿರೀಕ್ಷೆ ಇಟ್ಟಿದ್ದಾರೆ. ಪಕ್ಷದ ನಾಯಕರಾದ ಮೋದಿ, ಅಮಿತ್ ಶಾ, ಯಡಿಯೂರಪ್ಪ ನಿರೀಕ್ಷೆ ಇಟ್ಟಿದ್ದಾರೆ ಅದನ್ನು ಈಡೇರಿಸುತ್ತೇನೆ. ಜನರಿಗೋಸ್ಕರ ಜನಪರ ಆಡಳಿತ ನೀಡಿ, ಕರ್ನಾಟಕವನ್ನು ಉನ್ನತ ಮಟ್ಟದ ರಾಜ್ಯವಾಗಿ ರೂಪಿಸುತ್ತೇನೆ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹೋಗುತ್ತೇನೆ. ಸಾರ್ವಜನಿಕರ ಬಡಜನರ ಸಂಕಷ್ಟ, ಪ್ರವಾಹದಿಂದ ತೊಂದರೆಗೆ ಸಿಲುಕಿರುವ ಜನರ ನಿವಾರಣೆ ಮಾಡಲು ಹಗಲಿರುಳು ಕೆಲಸ ನಿರ್ವಹಿಸುತ್ತೇನೆ. ಹಣಕಾಸಿನ ಸ್ಥಿತಿಯನ್ನು ಉತ್ತಮ ಗೊಳಿಸಲು ಸರ್ವಥಾ ಕೆಲಸ ಮಾಡುತ್ತೇನೆ. ಪಕ್ಷದ ವರಿಷ್ಠರು ಯಾವುದೇ ಷರತ್ತು ವಿಧಿಸಿಲ್ಲ. ಪಕ್ಷದ ವರಿಷ್ಠರ ಆಶೀರ್ವಾದವೇ ನನಗೆ ಬಲ. ಜನರ ಸೇವೆಯನ್ನು ಮಾಡಲು ಸಕ್ರಿಯವಾಗಿ ತೊಡಗಿಕೊಳ್ಳುತ್ತೇನೆ. ಪಕ್ಷ, ಶಾಸಕರು, ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಉತ್ತಮ ಸರ್ಕಾರ ನೀಡುತ್ತೇನೆ. 


ಬಿಜೆಪಿ–ಶಾಸಕಾಂಗ ಪಕ್ಷದ ಸಭೆ

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು