ಗುರುವಾರ , ಫೆಬ್ರವರಿ 25, 2021
26 °C

ಏಪ್ರಿಲ್‌ ಬಳಿಕ ಯಡಿಯೂರಪ್ಪ ಸಿಎಂ ಸ್ಥಾನದಲ್ಲಿರುವುದು ಅನುಮಾನ: ಸಿದ್ದರಾಮಯ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

 ಸಿದ್ದರಾಮಯ್ಯ

ಮೈಸೂರು: 'ಆರ್‌ಎಸ್‌ಎಸ್‌ ಮೂಲಗಳಿಂದ ಸಿಕ್ಕಿರುವ ಮಾಹಿತಿ ಎಂದರೆ, ಏಪ್ರಿಲ್‌ ನಂತರ ಬಿ.ಎಸ್‌.ಯಡಿಯೂರಪ್ಪ ಅವರನ್ನು ಸ್ಥಾನದಿಂದ ತೆಗೆಯುವ ಸಾಧ್ಯತೆ ಇದೆ' ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಭಾನುವಾರ ಮೈಸೂರಿನಲ್ಲಿ ಸಿದ್ದರಾಮಯ್ಯ ಪುನರುಚ್ಚರಿಸಿದ್ದಾರೆ.

ಕಾಂಗ್ರೆಸ್ ನಾಯಕರೊಂದಿಗೆ ಶರತ್ ಬಚ್ಚೇಗೌಡ ಭೇಟಿ ವಿಚಾರವಾಗಿ ಕೇಳಿದ ಪ್ರಶ್ನೆಗೆ, 'ಶರತ್ ಬಚ್ಚೇಗೌಡ ಪಕ್ಷಕ್ಕೆ ಬರುವ ಕುರಿತು ಮಾತುಕತೆ ನಡೆಯುತ್ತಿದೆ. ಇನ್ನು 15 ದಿನಗಳಲ್ಲಿ ತೀರ್ಮಾನವಾಗಲಿದೆ. ನಮ್ಮ ಪಕ್ಷ ಮತ್ತು ಶರತ್ ಸೇರಿ ಗ್ರಾ.ಪಂ. ಚುನಾವಣೆಯಲ್ಲಿ ಎದುರಿಸಿದ್ದರು. ಹೊಸಕೋಟೆ ಕ್ಷೇತ್ರದಲ್ಲಿ ಶೇ 70 ರಷ್ಟು ಬೆಂಬಲಿತರು ಗೆದ್ದಿದ್ದಾರೆ. ಅದಕ್ಕೆ ಧನ್ಯವಾದ ಹೇಳಲು ಭೇಟಿ ಮಾಡಿದ್ದರು' ಎಂದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು