ಮಂಗಳವಾರ, 5 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಫ್ಲೆಕ್ಸ್‌ ಹರಿದ ಪ್ರಕರಣ: ಬಿಜೆಪಿಯ ಸ್ಯಾಡಿಸ್ಟ್ ಮನಸ್ಥಿತಿ ಎಂದ ಕಾಂಗ್ರೆಸ್‌

Last Updated 29 ಸೆಪ್ಟೆಂಬರ್ 2022, 10:25 IST
ಅಕ್ಷರ ಗಾತ್ರ

ಬೆಂಗಳೂರು: ಗುಂಡ್ಲುಪೇಟೆ ಪಟ್ಟಣದ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರತ್ ಜೋಡೊ ಯಾತ್ರೆ ಸಂಬಂಧ ನಾಯಕರಿಗೆ ಸ್ವಾಗತ ಕೋರಲು ಅಳವಡಿಸಿದ್ದಫ್ಲೆಕ್ಸ್‌ಗಳನ್ನು ಕಿಡಿಗೇಡಿಗಳು ಹರಿದು ಹಾಕಿದ್ದಾರೆ.

ಈ ವಿಚಾರವಾಗಿ ಟ್ವೀಟ್‌ ಮಾಡಿರುವ ಕಾಂಗ್ರೆಸ್‌, ಬಿಜೆಪಿ ವಿರುದ್ಧ ಹರಿಹಾಯ್ದಿದೆ.

‘ಬಿಜೆಪಿಗೆ ಎಂದೂ ಜೋಡಿಸುವುದು, ಕಟ್ಟುವುದು ತಿಳಿದಿಲ್ಲ. ಅವರದ್ದೇನಿದ್ದರೂ ಒಡೆಯುವ, ಕೆಡವುವ ಸಂಸ್ಕೃತಿ’ ಎಂದು ವಾಗ್ದಾಳಿ ನಡೆಸಿದೆ.

‘ಭಾರತ್‌ ಜೋಡೊ ಯಾತ್ರೆಯ ಯಶಸ್ಸನ್ನು ಸಹಿಸದ ಬಿಜೆಪಿ ಹತಾಶ ಸ್ಥಿತಿಗೆ ತಲುಪಿ ತನ್ನೊಳಗಿನ ಸ್ಯಾಡಿಸ್ಟ್ ಮನಸ್ಥಿತಿಯನ್ನು ಬ್ಯಾನರ್‌ಗಳ ಮೇಲೆ ತೋರಿಸುತ್ತಿದೆ’ ಎಂದು ಕೆಪಿಸಿಸಿ ಆರೋಪಿಸಿದೆ.

‘ಕೈಲಾಗದವರು ಮೈ ಪರಚಿಕೊಳ್ಳುವುದು ಎಂದರೆ ಇದೇ ಅಲ್ಲವೇ?’ ಎಂದು ಪ್ರಶ್ನಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT