ಭಾನುವಾರ, ಮಾರ್ಚ್ 26, 2023
24 °C

ಕಾಂಗ್ರೆಸ್‌ ಮುಕ್ತ ಭಾರತದ ಅಲೆ: ಬಿಜೆಪಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ದೇಶದಲ್ಲಿ ನಡೆದ ಉಪ ಚುನಾವಣೆಗಳಲ್ಲಿ ಕಾಂಗ್ರೆಸ್‌ ‍ಪರ ಅಲೆ ಎದ್ದಿಲ್ಲ. ಕಾಂಗ್ರೆಸ್‌ ಮುಕ್ತ ಭಾರತ ಅಭಿಯಾನದ ಪರವಾದ ಅಲೆ ಎದ್ದಿದೆ’ ಎಂದು ಬಿಜೆಪಿ ರಾಜ್ಯ ಘಟಕ ಹೇಳಿದೆ.

ಚುನಾವಣಾ ಫಲಿತಾಂಶ ಕುರಿತು ಬಿಜೆಪಿ ರಾಜ್ಯ ಘಟಕದ ಅಧಿಕೃತ ಟ್ವಿಟರ್‌ ಖಾತೆಯಲ್ಲಿ ಬುಧವಾರ ಪ್ರತಿಕ್ರಿಯಿಸಿದ್ದು, ‘ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ 19 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದು, ಒಂಬತ್ತು ಸ್ಥಾನಗಳನ್ನು ಹೊಸದಾಗಿ ತೆಕ್ಕೆಗೆ ತೆಗೆದುಕೊಂಡಿದೆ. ಕಾಂಗ್ರೆಸ್‌ ನೇತೃತ್ವದ ಯುಪಿಎ ಮೈತ್ರಿಕೂಟ ಎಂಟು ಕ್ಷೇತ್ರಗಳಲ್ಲಿ ಗೆದ್ದಿದ್ದು, ಮೂರು ಸ್ಥಾನಗಳನ್ನು ಕಳೆದುಕೊಂಡಿದೆ’ ಎಂದು ವಿವರ ನೀಡಿದೆ.

ಹಾನಗಲ್‌ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ವೈಯಕ್ತಿಕ ವರ್ಚಸ್ಸಿನ ಮೇಲೆ ಗೆಲುವು ಸಾಧಿಸಿದ್ದಾರೆ. ಅದನ್ನೇ ಮರುಭೂಮಿಯಲ್ಲಿ ಕಂಡ ಓಯಸಿಸ್‌ನಂತೆ ಕಾಂಗ್ರೆಸ್‌ ನಾಯಕರು ಭಾವಿಸಿದ್ದಾರೆ. ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಮಧ್ಯದ ಪೈಪೋಟಿಯಿಂದಾಗಿ ಆ ಗೆಲುವನ್ನು ಸಂಭ್ರಮಿಸುವುದಕ್ಕೂ ಕಾಂಗ್ರೆಸ್‌ನವರಿಗೆ ಸಾಧ್ಯವಾಗುತ್ತಿಲ್ಲ ಎಂದು ಹೇಳಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು