ಬೆಂಗಳೂರು: ‘ಬಿಜೆಪಿ ಸರ್ಕಾರದಲ್ಲಿನ ಶೇಕಡ 40 ರಷ್ಟು ಕಮಿಷನ್ ಭ್ರಷ್ಟಾಚಾರದ ಸೋಂಕು ಕೋವಿಡ್‌ಗಿಂತಲೂ ಅಪಾಯಕಾರಿ’ ಎಂದು ಕಾಂಗ್ರೆಸ್ ತೀವ್ರ ವಾಗ್ದಾಳಿ ನಡೆಸಿದೆ.

ಜಾತಿ, ಸಮುದಾಯ ಕೇಂದ್ರಿತ ನಿಗಮಗಳಲ್ಲಿನ ಭ್ರಷ್ಟಾಚಾರದ ಕುರಿತು ‘ಪ್ರಜಾವಾಣಿ’ಯ ಭಾನುವಾರದ ಸಂಚಿಕೆಯಲ್ಲಿ ಪ್ರಕಟವಾದ ‘ಒಳನೋಟ’ದ ವಿಶೇಷ ವರದಿಗಳನ್ನು ಕೆಪಿಸಿಸಿಯ ಅಧಿಕೃತ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದು, ‘ನಿಗಮ, ಮಂಡಳಿಗಳಲ್ಲಿ ಬಿಜೆಪಿ ಭ್ರಷ್ಟೋತ್ಸವ ವಿಜೃಂಭಣೆಯಿಂದ ನಡೆಯುತ್ತಿದೆ. ಬಡವರ ಹಿಂದುಳಿದವರ ಏಳಿಗೆಯ ಬದಲು ಭ್ರಷ್ಟರ ಏಳಿಗೆಯಾಗುತ್ತಿದೆ. ಬಡವರನ್ನು ತಲುಪಬೇಕಾದ ನೂರಾರು ಕೋಟಿ ಅನುದಾನ ಬಿಜೆಪಿ ಭ್ರಷ್ಟರ ತಿಜೋರಿ ಸೇರುತ್ತಿದೆ’ ಎಂದು ಆರೋಪಿಸಿದೆ.

ಸಮಾಜ ಕಲ್ಯಾಣ ಇಲಾಖೆ ಸ್ವಯಂ ಕಲ್ಯಾಣ ಇಲಾಖೆ ಆಗಿರುವಾಗ ಗಂಗಾ ಕಲ್ಯಾಣ ಯೋಜನೆಯಲ್ಲಿ ಭ್ರಷ್ಟರ ಕಲ್ಯಾಣ ಆಗುತ್ತಿರು
ವುದರಲ್ಲಿ ಆಶ್ಚರ್ಯವಿಲ್ಲ.

ಇಲಾಖಾ ತನಿಖೆಯಲ್ಲಿ ಮೇಲ್ನೋ ಟಕ್ಕೆ ಹಗರಣ ಸಾಬೀತಾಗಿದ್ದರೂ ಸರ್ಕಾರ ಉನ್ನತ ತನಿಖೆಗೆ ಹಿಂದೇಟು ಹಾಕುತ್ತಿದೆ. ಭ್ರಷ್ಟರ ರಕ್ಷಣೆಗಾಗಿ ಪರಿಶಿಷ್ಟರಿಗೆ ಅನ್ಯಾಯ ಮಾಡಲಾಗುತ್ತಿದೆ ಎಂದು ದೂರಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.