ಶುಕ್ರವಾರ, ಡಿಸೆಂಬರ್ 9, 2022
22 °C

ಮೀಸಲಾತಿ ಹೆಚ್ಚಳ: ಇದೇ 9ರ ಒಳಗೆ ಸೂಕ್ತ ನಿರ್ಣಯಕ್ಕೆ ಸಿಎಂಗೆ ಒತ್ತಾಯ– ಸಿ.ಟಿ. ರವಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಪರಿಶಿಷ್ಟ ಪಂಗಡಗಳಿಗೆ ಮೀಸಲಾತಿ ಪ್ರಮಾಣ ಹೆಚ್ಚಿಸಬೇಕು ಎಂಬ ಬೇಡಿಕೆ ಪುರಸ್ಕರಿಸಿ ಇದೇ 9ರ ಒಳಗೆ ಸೂಕ್ತ ನಿರ್ಣಯ ಕೈಗೊಳ್ಳಬೇಕು ಎಂದು ಬಿಜೆಪಿ ಪ್ರಮುಖ ನಾಯಕರ ಸಭೆ ಒಕ್ಕೊರಲಿನಿಂದ ಮುಖ್ಯಮಂತ್ರಿಯವರನ್ನು ಒತ್ತಾಯಿಸಿದೆ.

ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಗೂ ಮುನ್ನ ಪ್ರಮುಖ ನಾಯಕರ ಸಭೆ ನಡೆಯಿತು. ಬಳಿಕ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು ಸುದ್ದಿಗೋಷ್ಠಿಯಲ್ಲಿ ವಿವರ ನೀಡಿದರು.

ಎಸ್ಟಿ ಸಮುದಾಯದ ಬೇಡಿಕೆ ನ್ಯಾಯೋಚಿತವಾಗಿದೆ. ಅಲ್ಲದೇ ಎಸ್ಸಿ ಸಮುದಾಯದ ಬೇಡಿಕೆ ಬಗ್ಗೆಯೂ ಬಿಜೆಪಿ ಸಕಾರಾತ್ಮಕವಾಗಿದೆ. ನ್ಯಾಯಮೂರ್ತಿ ಸದಾಶಿವ ವರದಿ ಸಾಧಕ- ಬಾಧಕಗಳ ಪರಾಮರ್ಶೆ ನಡೆದಿದೆ. ಮುಂದೆ ಈ ಸಂಬಂಧ ನಿರ್ಣಯ ತೆಗೆದುಕೊಳ್ಳಲಾಗುವುದು ಎಂದು ರವಿ ಹೇಳಿದರು

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು