ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿ ತೊರೆದು ಕಾಂಗ್ರೆಸ್‌ ಸೇರಲು ಸಿದ್ಧವಾದ ಸಂದೇಶ್

Last Updated 12 ಡಿಸೆಂಬರ್ 2022, 13:31 IST
ಅಕ್ಷರ ಗಾತ್ರ

ಮೈಸೂರು: ‘ಬಿಜೆಪಿ ತೊರೆದು ಕಾಂಗ್ರೆಸ್ ಸೇರಲು ನಿರ್ಧರಿಸಿದ್ದೇನೆ. ಈ ಬಗ್ಗೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಜೊತೆ ಚರ್ಚಿಸಿದ್ದೇನೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರೊಂದಿಗೂ ಮಾತನಾಡಲಿದ್ದೇನೆ’ ಎಂದು ವಿಧಾನಪರಿಷತ್‌ ಮಾಜಿಸದಸ್ಯ ಸಂದೇಶ್‌ ನಾಗರಾಜ್‌ ಇಲ್ಲಿ ಸೋಮವಾರ ತಿಳಿಸಿದರು.

ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ನಾನು ಬಿಜೆಪಿಯಲ್ಲಿ ಸಕ್ರಿಯನಾಗಿಲ್ಲ; ಅಕ್ರಮವಾಗಿದ್ದೇನೆ. ಬಿಜೆಪಿಯವರು ನನ್ನನ್ನು ಪಕ್ಷಕ್ಕೆ ಸೇರಿಸಿಕೊಂಡು ಅನ್ಯಾಯ ಮಾಡಿದರು. ಅವರು, ಅನ್ಯಾಯ ಮಾಡುವುದರಲ್ಲಿ ನಿಸ್ಸೀಮರು ಹಾಗೂ ನಂಬರ್‌ ಒನ್ ಸ್ಥಾನದಲ್ಲಿದ್ದಾರೆ. ಆ ಪಕ್ಷದ ಸಹವಾಸ ಸಾಕು’ ಎಂದರು.

‘ಎ.ಎಚ್.ವಿಶ್ವನಾಥ್‌ಗೂ ಅನ್ಯಾಯ ಮಾಡಿದರು. ಪಕ್ಷವನ್ನು ಅಧಿಕಾರಕ್ಕೆ ತಂದ ಬಿ.ಎಸ್.ಯಡಿಯೂರಪ್ಪ ಅವರನ್ನು ಒಳ್ಳೆಯತನದಲ್ಲೇ ಮುಗಿಸಿದರು. ಆ ಕಾರಣದಿಂದಲೇ ಆ ಪಕ್ಷಕ್ಕೆ 40 ಸ್ಥಾನ ನಷ್ಟವಾಗಲಿದೆ. ಈಗ ಅವರ ಪುತ್ರ ಬಿ.ವೈ.ವಿಜಯೇಂದ್ರ ಅವರನ್ನು ವರುಣಾ ಕ್ಷೇತ್ರಕ್ಕೆ ತಂದು ಮುಗಿಸಲು ಹೊರಟಿದ್ದಾರೆ. ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆಯುವ ಪ್ಲಾನ್ ಬಿಜೆಪಿಯದ್ದು. ಅವರ ರಾಜಕೀಯ ಭವಿಷ್ಯ ಚೆನ್ನಾಗಿರಬೇಕಾದರೆ ಶಿಕಾರಿಪುರದಲ್ಲೇ ಸ್ಪರ್ಧಿಸಲಿ’ ಎಂದು ಹೇಳಿದರು.

‘ಬಿಜೆಪಿಯ 10ಕ್ಕೂ ಹೆಚ್ಚಿನ ಶಾಸಕರು ಕಾಂಗ್ರೆಸ್‌ಗೆ ಬರುತ್ತಾರೆ’ ಎಂದು ಭವಿಷ್ಯ ನುಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT