ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿ ಕಾರ್ಯಕಾರಿಣಿ| ಸಂಪುಟ, ಲವ್‌ ಜಿಹಾದ್‌ ತಡೆ ಕಾನೂನಿನ ಚರ್ಚೆ ಸಾಧ್ಯತೆ

ಬಿಜೆಪಿ ರಾಜ್ಯ ಕಾರ್ಯಕಾರಿಣಿ, ಕೋರ್‌ ಕಮಿಟಿ ಸಭೆ ಇಂದು
Last Updated 4 ನವೆಂಬರ್ 2020, 17:55 IST
ಅಕ್ಷರ ಗಾತ್ರ

ಮಂಗಳೂರು: ಬಿಜೆಪಿ ರಾಜ್ಯ ಕಾರ್ಯಕಾರಿಣಿ ಹಾಗೂ ಕೋರ್‌ ಕಮಿಟಿ ಸಭೆ ಗುರುವಾರ (ಇದೇ 5) ನಗರದಲ್ಲಿ ನಡೆಯಲಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಕೇಂದ್ರ ಸಚಿವರಾದ ಪ್ರಲ್ಹಾದ್‌ ಜೋಶಿ, ಡಿ.ವಿ. ಸದಾನಂದಗೌಡ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ಕುಮಾರ್ ಕಟೀಲ್‌ ಸೇರಿದಂತೆ ಹಲವರು ಭಾಗವಹಿಸಲಿದ್ದಾರೆ.

ರಾಜ್ಯ ಕಾರ್ಯಕಾರಿಣಿಯಲ್ಲಿ ಪ್ರಮುಖವಾಗಿ ಮುಂಬರುವ ಗ್ರಾಮ ಪಂಚಾಯಿತಿ, ಸ್ಥಳೀಯ ಸಂಸ್ಥೆಗಳ ಚುನಾವಣೆಗಾಗಿಬೂತ್‌ ಮಟ್ಟದ ‘ಪಂಚರತ್ನ’ ಸಮಿತಿ ರಚನೆ ಸೇರಿದಂತೆ ಕಾರ್ಯಯೋಜನೆ ರೂಪಿಸಲು ನಿರ್ಧರಿಸಲಾಗಿದೆ. ಇನ್ನೊಂದೆಡೆ ಪಕ್ಷದ ಪ್ರಮುಖರ ಕೋರ್‌ ಕಮಿಟಿ ಸಭೆಯಲ್ಲಿ ಸಚಿವ ಸಂಪುಟ ವಿಸ್ತರಣೆ, ಗಸ್ತಿ ನಿಧನದಿಂದ ತೆರವಾದ ಸ್ಥಾನಕ್ಕೆ ಅಭ್ಯರ್ಥಿಯ ಆಯ್ಕೆ ಹಾಗೂ ಲವ್ ಜಿಹಾದ್ ತಡೆಗೆ ಕಾನೂನು ರೂಪಿಸುವ ಕುರಿತು ಚರ್ಚೆಯಾಗುವ ಸಾಧ್ಯತೆ ಇದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT