ಬುಧವಾರ, ಜೂನ್ 23, 2021
30 °C

ಚುನಾವಣಾ ಫಲಿತಾಂಶ | ಸರ್ಕಾರ ಜನಬೆಂಬಲ ಕಳೆದುಕೊಂಡಿರುವುದು ಸಾಬೀತು: ಸಿದ್ದರಾಮಯ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರುವ ಬಿಜೆಪಿ ಸರ್ಕಾರ ಜನಬೆಂಬಲ ಕಳೆದುಕೊಂಡಿರುವುದು ಹತ್ತು ನಗರ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಿಂದ ಸಾಬೀತಾಗಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

‘ಕೋವಿಡ್‌ ಸಂದರ್ಭದಲ್ಲಿ ಸರ್ಕಾರ ಜನರ ಜೀವದ ಜತೆ ಚೆಲ್ಲಾಟ ಆಡುತ್ತಿದೆ. ಈ ಕಾರಣದಿಂದ ಜನರು ಬಿಜೆಪಿಗೆ ತಕ್ಕ ಪಾಠ ಕಲಿಸುವ ಮೂಲಕ ತಮ್ಮ ಆಕ್ರೋಶ ಹೊರಹಾಕಿದ್ದಾರೆ. ಜನರ ಕೆಂಗಣ್ಣಿಗೆ ಗುರಿಯಾಗಿರುವ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಸರ್ಕಾರವನ್ನು ವಿಸರ್ಜಿಸಿ ಚುನಾವಣೆಗೆ ಹೋಗುವುದು ಉತ್ತಮ’ ಎಂದು ಹೇಳಿಕೆಯಲ್ಲಿ ಒತ್ತಾಯಿಸಿದ್ದಾರೆ.

ಮತದಾರ ಬದಲಾವಣೆ ಬಯಸಿದ್ದಾನೆ: ಚುನಾವಣಾ ಫಲಿತಾಂಶದ ಬಳಿಕ ಪ್ರತಿಕ್ರಿಯಿಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌, ‘ಚುನಾವಣೆ ನಡೆದ ಹತ್ತು ನಗರ ಸ್ಥಳೀಯ ಸಂಸ್ಥೆಗಳ ಪೈಕಿ ಹೆಚ್ಚು ಸಂಸ್ಥೆಗಳಲ್ಲಿ ಕಾಂಗ್ರೆಸ್‌ ಗೆಲುವು ದಾಖಲಿಸಿದೆ. ರಾಜ್ಯದಲ್ಲಿ ಬದಲಾವಣೆ ಬಯಸಿ ಮತದಾರರು ಕಾಂಗ್ರೆಸ್‌ಗೆ ಬೆಂಬಲ ನೀಡಿದ್ದಾರೆ’ ಎಂದರು.

ಗ್ರಾಮ ಪಂಚಾಯಿತಿ ಚುನಾವಣೆಯಲ್ಲೂ ಕಾಂಗ್ರೆಸ್‌ ಪಕ್ಷದ ಬೆಂಬಲಿತರು ಹೆಚ್ಚಿನ ಸಂಖ್ಯೆಯಲ್ಲಿ ಗೆಲುವು ಸಾಧಿಸಿದ್ದರು. ಆಗ ಪಕ್ಷದ ಚಿಹ್ನೆ ಇಲ್ಲ ಎಂದು ಕೆಲವು ಹೇಳಿದ್ದರು. ಈಗ ಚುನಾವಣೆ ನಡೆದ 266 ವಾರ್ಡ್‌ಗಳ ಪೈಕಿ 119 ಸ್ಥಾನಗಳನ್ನು ಕಾಂಗ್ರೆಸ್‌ ಪಡೆದಿದೆ. ಗೆಲುವು ಸಾಧಿಸಿರುವ 14 ಮಂದಿ ಪಕ್ಷೇತರ ಅಭ್ಯರ್ಥಿಗಳಲ್ಲಿ 11 ಜನರು ಕಾಂಗ್ರೆಸ್‌ನ ಬಂಡಾಯ ಅಭ್ಯರ್ಥಿಗಳು ಎಂದು ಹೇಳಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು