ಸೋಮವಾರ, ಅಕ್ಟೋಬರ್ 18, 2021
22 °C

ಮಕ್ಕಳ ಜೀವ ಮತ್ತು ಜೀವನದ ಜೊತೆ ಆಟವಾಡುತ್ತಿದೆ ಭ್ರಷ್ಟ ಸರ್ಕಾರ: ಕಾಂಗ್ರೆಸ್‌

ಪ್ರಜಾವಾಣಿ ವೆಬ್‌ ಡೆಸ್ಕ್‌‌ Updated:

ಅಕ್ಷರ ಗಾತ್ರ : | |

Prajavani Photo

ಬೆಂಗಳೂರು: ಕೊರೊನಾ ಮೂರನೇ ಅಲೆಯನ್ನು ಎದುರಿಸಲು ರಾಜ್ಯ ಸರ್ಕಾರ ಯಾವ ಸಿದ್ಧತೆಯನ್ನೂ ಮಾಡಿಕೊಂಡಿಲ್ಲ ಎಂದು ಕಾಂಗ್ರೆಸ್‌ ಕಿಡಿಕಾರಿದೆ.

ಪ್ರಜಾವಾಣಿ ವರದಿ 'ಮಕ್ಕಳನ್ನು ಕಾಡಲಾರಂಭಿಸಿದ ವೈರಾಣು ಜ್ವರ' ಉಲ್ಲೇಖಿಸಿ ಟ್ವೀಟ್‌ ಮಾಡಿರುವ ಕಾಂಗ್ರೆಸ್‌, ಕೊರೊನಾ 3ನೇ ಅಲೆಯನ್ನು ಎದುರಿಸಲು ಯಾವ ಸಿದ್ಧತೆಯನ್ನೂ ಮಾಡಿಕೊಂಡಿಲ್ಲ ಎಂಬುದಕ್ಕೆ ನಿದರ್ಶನ ಎಂದಿದೆ. ಮಕ್ಕಳಿಗೆ ಮೋಸ ಎಂಬ ಹ್ಯಾಶ್‌ಟ್ಯಾಗ್‌ ಬಳಕೆ ಮಾಡಿ ಟ್ವೀಟ್‌ ಮಾಡಿದೆ.

'ಹಲವು ಜಿಲ್ಲೆಗಳಲ್ಲಿ ಮಕ್ಕಳಿಗೆ ಕಾಣಿಸಿಕೊಂಡಿರುವ ವೈರಲ್‌ ಜ್ವರಕ್ಕೆ ಬೆಡ್‌ ಸಿಗುತ್ತಿಲ್ಲ, ಚಿಕಿತ್ಸೆ ಸಿಗುತ್ತಿಲ್ಲ, ಮಕ್ಕಳ ತಜ್ಞ ವೈದ್ಯರ ಕೊರತೆ ಇದೆ. ಈಗಲೇ ಬೆಡ್‌ಗಳ ಕೊರತೆ ಎದುರಾಗಿರುವುದು ಈ ಭ್ರಷ್ಟ ಸರ್ಕಾರ ಕೊರೊನಾ 3ನೇ ಅಲೆ ಎದುರಿಸಲು ಯಾವ ಸಿದ್ಧತೆಯನ್ನೂ ಮಾಡಿಕೊಂಡಿಲ್ಲ ಎಂಬುದಕ್ಕೆ ನಿದರ್ಶನ' ಎಂದು ಟ್ವೀಟ್‌ನಲ್ಲಿ ತಿಳಿಸಿದೆ.

'ಕೊರೊನಾ ಕ್ಲಿಷ್ಟ ಪರಿಸ್ಥಿತಿಯಿಂದ ಬಿಜೆಪಿ ಸರ್ಕಾರ ಪಾಠ ಕಲಿತಿಲ್ಲ, ವೈದ್ಯಕೀಯ ವ್ಯವಸ್ಥೆ ಬಲಗೊಳಿಸಿಲ್ಲ. ಮಕ್ಕಳ ಜೀವ ಮತ್ತು ಜೀವನದ ಜೊತೆ ಆಟವಾಡುತ್ತಿದೆ ಭ್ರಷ್ಟ ಸರ್ಕಾರ' ಎಂದು ಮತ್ತೊಂದು ಟ್ವೀಟ್‌ನಲ್ಲಿ ದೂರಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು