ಭಾನುವಾರ, ನವೆಂಬರ್ 28, 2021
19 °C

ಬಿಜೆಪಿ ಹಣ ಹಂಚಿ ಮತ ಖರೀದಿಸುತ್ತಿದೆ: ಎಚ್‌.ಡಿ. ಕುಮಾರಸ್ವಾಮಿ ಆರೋಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ವಿಜಯಪುರ: ಸಿಂದಗಿ ಕ್ಷೇತ್ರದಲ್ಲಿ ಬಿಜೆಪಿ ಹಣ ಹಂಚಿ ಮತ ಖರೀದಿಸುವ ತಯಾರಿಯಲ್ಲಿದೆ ಎಂಬ ಸಂಶಯ ವ್ಯಕ್ತವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದರು.

ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ವಿಧಾನಸಭೆ ಸಾರ್ವತ್ರಿಕ ಚುನಾವಣೆಯಲ್ಲಿ 'ಜೆಡಿಎಸ್ ಮಿಷನ್ 123' ತರಲು ಸಿಂದಗಿ, ಹಾನಗಲ್‌ ಉಪಚುನಾವಣೆ ವೇದಿಕೆಯಾಗಿದೆ ಎಂದು ಹೇಳಿದರು‌.

ದೇವೇಗೌಡರು ಸಿಂದಗಿ ಕ್ಷೇತ್ರದಲ್ಲಿ ನೀರಾವರಿ ಯೋಜನೆ ತಂದು ಉತ್ತಮ ಕೆಲಸ ಮಾಡಿದ್ದಾರೆ. ರೈತರು ಸಹ ಗೌಡರು ಮಾಡಿದ ಕೆಲಸದಿಂದ  ನೆಮ್ಮದಿಯಾಗಿ ಊಟ ಮಾಡುತ್ತಿದ್ದೇವೆ ಎನ್ನುತ್ತಿದ್ದಾರೆ. ಕ್ಷೇತ್ರದಲ್ಲಿ ಜಾತಿಭೇದ ಮೆರೆತು ಜೆಡಿಎಸ್‌ಗೆ ಬೆಂಬಲ ನೀಡಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು