ಶುಕ್ರವಾರ, ಸೆಪ್ಟೆಂಬರ್ 30, 2022
26 °C

ಉಮೇಶ್‌ ಕತ್ತಿ ನಿಧನ: ಬಿಜೆಪಿ ಜನೋತ್ಸವ ಕಾರ್ಯಕ್ರಮ ಭಾನುವಾರಕ್ಕೆ ಮುಂದೂಡಿಕೆ

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ಬೆಂಗಳೂರು: ದೊಡ್ಡಬಳ್ಳಾಪುರದಲ್ಲಿ ಸೆ.8ರಂದು (ಗುರುವಾರ) ನಡೆಯಬೇಕಿದ್ದ ಬಿಜೆಪಿ ಜನೋತ್ಸವ ಕಾರ್ಯಕ್ರಮವನ್ನು ಸೆ. 11ಕ್ಕೆ ‌ಮುಂದೂಡಲಾಗಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ. 

ರಾಜ್ಯದ ಅರಣ್ಯ, ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಉಮೇಶ್‌ ವಿ. ಕತ್ತಿ (62) ಅವರು ಹೃದಯಾಘಾತದಿಂದ ಮಂಗಳವಾರ ರಾತ್ರಿ ನಿಧನರಾದರು. ಈ ಹಿನ್ನೆಲೆಯಲ್ಲಿ ಜನೋತ್ಸವ ಕಾರ್ಯಕ್ರಮವನ್ನು ‌ಮುಂದೂಡಲು ಸರ್ಕಾರ ತೀರ್ಮಾನಿಸಿದೆ. 

ಇದರೊಂದಿಗೆ ಸತತ ಎರಡನೇ ಬಾರಿಗೆ ಜನೋತ್ಸವ ಕಾರ್ಯಕ್ರಮವನ್ನು ಮುಂದೂಡಿದಂತಾಗಿದೆ.

ಕೇಂದ್ರ ಹಾಗೂ ರಾಜ್ಯ ಸರ್ಕಾರದ ಅನೇಕ ಜನಪರ ಯೋಜನೆಗಳ ಬಗ್ಗೆ ಜನತೆಗೆ ತಿಳಿಸುವ ಉದ್ದೇಶದಿಂದ ರಾಜ್ಯದಲ್ಲಿ 7 ಕಡೆ ಜನೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಅದರಂತೆ ದೊಡ್ಡಬಳ್ಳಾಪುರದಲ್ಲಿ ನಾಳೆ ಮೊದಲ ಜನೋತ್ಸವ ಕಾರ್ಯಕ್ರಮ ನಡೆಯಬೇಕಿತ್ತು.

ಮುಖ್ಯಮಂತ್ರಿ ಬಸವರಾಜು ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಾಗೂ ಕೇಂದ್ರ ಸಚಿವರು ಸೇರಿದಂತೆ ಅನೇಕ ಗಣ್ಯರು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. 

ಇವನ್ನೂ ಓದಿ...

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು