ಚಿತ್ರದುರ್ಗ: ಬಿಜೆಪಿ ಕಾರ್ಯಕರ್ತರ ಪಕ್ಷವೇ ಹೊರತು ವ್ಯಕ್ತಿ ಕೇಂದ್ರಿತ ಪಕ್ಷವಲ್ಲ. ಒಬ್ಬ ವ್ಯಕ್ತಿ ನಾಯಕತ್ವ ಅಥವಾ ಮುಖ್ಯಮಂತ್ರಿ ಹೆಸರಿನಲ್ಲಿ ಚುನಾವಣೆ ಮಾಡಿಲ್ಲ. ಈ ವರೆಗೂ ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆ ಎದುರಿಸಿದ್ದೇವೆ ಎಂದು ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ರಾಜ್ಯ ಸಚಿವ ಎ.ನಾರಾಯಣಸ್ವಾಮಿ ತಿಳಿಸಿದರು.

ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಪಕ್ಷ ನಿರ್ಲಕ್ಷ್ಯ ಮಾಡುತ್ತಿಲ್ಲ. ಅವರಿಗೆ ಯಾರೂ ವಿರೋಧ ವ್ಯಕ್ತಪಡಿಸಿಲ್ಲ. ಅವರ ಜಪ ಮಾಡಿಕೊಂಡು ರಾಜಕೀಯ ಮಾಡುವುದು ಅನಿವಾರ್ಯವಾಗಿದೆ. ಕಾರ್ಯಕರ್ತರ ಪಡೆಯೊಂದಿಗೆ ರಾಜಕಾರಣ ಮಾಡಿ ಮುಂದಿನ ಚುನಾವಣೆ ಗೆಲ್ಲುತ್ತೇವೆ’ ಎಂದರು.

‘ಜನಾಶೀರ್ವಾದ ಯಾತ್ರೆಯಲ್ಲಿ ನನ್ನಿಂದ ತಪ್ಪಾಗಿದೆ. ಯಾತ್ರೆಯ ಬಳಿಕ ಕೋವಿಡ್ ಹೆಚ್ಚಾಗಿಲ್ಲ ಎಂಬುದು ನನ್ನ ಪುಣ್ಯ. ಗಣೇಶ ಉತ್ಸವದ ಸಂದರ್ಭದಲ್ಲಿ ಕೋವಿಡ್ ಬಗ್ಗೆ ಇನ್ನಷ್ಟು ಎಚ್ಚರಿಕೆಯಿಂದ ಇರಬೇಕಾದ ಅಗತ್ಯವಿದೆ. ಸರ್ಕಾರದ ನಿಯಮವನ್ನು ಪಾಲಿಸಿದ ಧರ್ಮರಕ್ಷಣೆ ಮಾಡಬೇಕು. ಧಾರ್ಮಿಕ ವಿಚಾರ ಮುಂದಿಟ್ಟುಕೊಂಡು ಸರ್ಕಾರದ ವಿರುದ್ಧ ಸೆಡ್ಡು ಹೊಡೆಯುವುದು ಸರಿಯಲ್ಲ’ ಎಂದು ಹೇಳಿದರು.

ಅಗತ್ಯ ವಸ್ತುಗಳ ಬೆಲೆ ಏರಿಕೆ ಆಗಬಾರದು. ಈ ವಿಚಾರವನ್ನು ಪಕ್ಷದ ಮೂಲಕ ಪ್ರಧಾನಿಗೆ ತಲುಪಿಸಿದ್ದೇವೆ. ಸರಿಯಾದ ಸಮಯದಲ್ಲಿ ನಿರ್ಧಾರ ತೆಗೆದುಕೊಳ್ಳುವ ಶಕ್ತಿ ನರೇಂದ್ರ ಮೋದಿ ಅವರಿಗೆ ಇದೆ.

-ಎ.ನಾರಾಯಣಸ್ವಾಮಿ, ಕೇಂದ್ರ ಸಚಿವ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.