ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿ ನಾಯಕನ ಹತ್ಯೆ: ಕೇರಳ ಸರ್ಕಾರದ ವಿರುದ್ಧ ನಳಿನ್‌ ಕುಮಾರ್ ಕಟೀಲ್ ಆಕ್ರೋಶ

Last Updated 19 ಡಿಸೆಂಬರ್ 2021, 12:52 IST
ಅಕ್ಷರ ಗಾತ್ರ

ಬೆಂಗಳೂರು: ಕೇರಳದ ಆಲಪ್ಪುಳದಲ್ಲಿ ಬಿಜೆಪಿಯ ಒಬಿಸಿ ಮೋರ್ಚಾದ ರಾಜ್ಯ ಕಾರ್ಯದರ್ಶಿ ರಂಜಿತ್ ಶ್ರೀನಿವಾಸನ್ ಅವರನ್ನು ಹತ್ಯೆ ಮಾಡಿರುವುದನ್ನು ಪಕ್ಷದ ಕರ್ನಾಟಕ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಖಂಡಿಸಿದ್ದಾರೆ.

ಈ ವಿಚಾರವಾಗಿ ಟ್ವೀಟ್ ಮಾಡಿರುವ ಅವರು, ಕೇರಳ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

‘ನಮ್ಮ ಪಕ್ಷದ ಕೇರಳ ಒಬಿಸಿ ಮೋರ್ಚಾದ ರಾಜ್ಯ ಕಾರ್ಯದರ್ಶಿ ರಂಜಿತ್ ಶ್ರೀನಿವಾಸನ್ ಅವರು ಮೂಲಭೂತವಾದಿಗಳ ರಕ್ತದಾಹಕ್ಕೆ ಬಲಿಯಾಗಿರುವುದು ಖಂಡನೀಯ. ಕೇರಳದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹಾಳಾಗಲು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ದುರಾಡಳಿತವೇ ಕಾರಣ. ಇಂತಹ ಕೃತ್ಯಗಳಿಂದ ದೇಶಭಕ್ತರನ್ನು ಹೆದರಿಸಲು ಸಾಧ್ಯವಿಲ್ಲ’ ಎಂದು ಟ್ವೀಟ್‌ನಲ್ಲಿ ನಳಿನ್ ಉಲ್ಲೇಖಿಸಿದ್ದಾರೆ.

ರಂಜಿತ್ ಶ್ರೀನಿವಾಸನ್ ಅವರನ್ನು ಭಾನುವಾರ ಬೆಳಿಗ್ಗೆ ಹತ್ಯೆ ಮಾಡಲಾಗಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಕೂಡ ಹತ್ಯೆಯನ್ನು ಖಂಡಿಸಿದ್ದು, ಪಿಣರಾಯಿ ನೇತೃತ್ವದ ಕೇರಳ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT