ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇ.ಡಿ. ಕಚೇರಿ ಮುತ್ತಿಗೆಯಿಂದ ಸೋನಿಯಾ, ರಾಹುಲ್ ಶುದ್ಧಹಸ್ತರಾಗುತ್ತಾರಾ?: ನಳಿನ್

ಅಕ್ಷರ ಗಾತ್ರ

ಬೆಂಗಳೂರು: ಜಾರಿ ನಿರ್ದೇಶನಾಲಯದ (ಇ.ಡಿ) ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರ ವಿರುದ್ಧ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಾಗ್ದಾಳಿ ನಡೆಸಿದ್ದಾರೆ.

‘ಇ.ಡಿ. ಕಚೇರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಮುತ್ತಿಗೆ ಹಾಕಿದ ತಕ್ಷಣ ಸೋನಿಯಾ ಹಾಗೂ ರಾಹುಲ್ ಶುದ್ಧಹಸ್ತರಾಗುತ್ತಾರಾ? ಅವರು ಅಪ್ಪಟ ಪ್ರಾಮಾಣಿಕರಾದರೆ ಹೆದರುವ ಅಗತ್ಯ ಏನು? ವಿಚಾರಣೆಯೇ ನಡೆಯಬಾರದು ಎಂದು ಬಯಸುವ ಕಾಂಗ್ರೆಸ್ ನಾಯಕರು ಜನರ ಮುಂದೆ ನೈತಿಕವಾಗಿ ಬೆತ್ತಲಾಗಿದ್ದಾರೆ’ ಎಂದು ನಳಿನ್ ಕುಮಾರ್ ಕಟೀಲ್ ಟ್ವೀಟ್ ಮಾಡಿದ್ದಾರೆ.

‘ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಕಾನೂನಿಗೆ ಅತೀತರಾದವರಲ್ಲ. ಅವರು ಇ.ಡಿ. ವಿಚಾರಣೆ ಎದುರಿಸಿದರೆ ಕೆಪಿಸಿಸಿ ಅಧ್ಯಕ್ಷರು ತಮ್ಮ ಪಟಾಲಂ ಕಟ್ಟಿ ಯಾಕೆ ಇ.ಡಿ. ಕಚೇರಿ ಮುಂದೆ ಪ್ರತಿಭಟನೆ ಮಾಡಬೇಕು. ಇದರಿಂದ ಕಳ್ಳನ ಮನಸ್ಸು ಹುಳ್ಳಗೆ ಎಂದು ಸಾಬೀತಾಗಿದೆ. ಕಾಂಗ್ರೆಸ್ ಕಾರ್ಯಕರ್ತರಿಗೆ ಆತ್ಮಗೌರವ ಇಲ್ವೇ?’ ಎಂದು ಮತ್ತೊಂದು ಟ್ವೀಟ್‌ನಲ್ಲಿ ಉಲ್ಲೇಖಿಸಿದ್ದಾರೆ.

ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರನ್ನು ಇ.ಡಿ. ವಿಚಾರಣೆಗೆ ಒಳಪಡಿಸುತ್ತಿರುವ ಮಧ್ಯೆಯೇ ದೆಹಲಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಇ.ಡಿ. ಕಚೇರಿ ಹೊರಗೆ ಪ್ರತಿಭಟನೆ ನಡೆಸಿದ್ದಾರೆ. ಬೆಂಗಳೂರಿನ ಶಾಂತಿನಗರದಲ್ಲಿರುವ ಜಾರಿ ನಿರ್ದೇಶನಾಲಯ ಕಚೇರಿಯತ್ತ ಹೊರಟ ಕಾಂಗ್ರೆಸ್ ಪ್ರತಿಭಟನಾ ರ‍್ಯಾಲಿಯನ್ನು ಅರ್ಧದಲ್ಲಿಯೇ ತಡೆದ ಪೊಲೀಸರು, ಪ್ರತಿಭಟನಕಾರರನ್ನು ವಶಕ್ಕೆ ಪಡೆದು ಬಳಿಕ ಬಿಡುಗಡೆ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT