ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಪಕ್ಷವನ್ನು ಉದ್ದೇಶಿಸಿ ಕಾಂಗ್ರೆಸ್ ಟ್ವಿಟರ್ ಮೂಲಕ ಮಾಡಿರುವ ಟೀಕೆಗೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಿರುಗೇಟು ನೀಡಿದ್ದಾರೆ.

‘ಕಾಮಿಡಿ ಮಾಡುವ ವ್ಯಕ್ತಿ ಯಾರು ಮತ್ತು ಕಾಮಿಡಿಯಾದ ಪಕ್ಷ ಯಾವುದು ಎಂದು ದೇಶದ ಜನತೆಗೆ ಸರಿಯಾಗಿ ತಿಳಿದಿದೆ! ಜೈಲಿಗೆ ಹೋಗಿ ಬಂದವರೆಲ್ಲಾ ಬಿಜೆಪಿಯಲ್ಲೇ ಇರುವುದು ಎಂದಾದರೇ ತಿಹಾರ್ ಜೈಲು ಕರ್ನಾಟಕ ಕಾಂಗ್ರೆಸ್‌ಗೆ ಜೈಲಿನ ಹಾಗೆ ಕಾಣಲಿಲ್ಲವೇ? ಜಾಮೀನಿನ ಮೇಲೆ ಹೊರಗೆ ಇರುವುದೇ ಪಕ್ಷದ ಅಧ್ಯಕ್ಷರಾಗಲು ಇರುವ ಮಾನದಂಡವೇ?’ ಎಂದು ಅವರು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ:ಬ್ರಿಟಿಷರಿಗಿಂತ ಹೆಚ್ಚಾಗಿ ಸಮಾಜ ಒಡೆದ ಮುಖ್ಯಮಂತ್ರಿ ಸಿದ್ದರಾಮಯ್ಯ: ಕಟೀಲ್ ಟೀಕೆ

ಯಡಿಯೂರಪ್ಪ ಅವರನ್ನು ಹೊಗಳಿ ಬಿಜೆಪಿ ಟ್ವಿಟರ್ ಖಾತೆಯಿಂದ ಮಾಡಿದ್ದ ಟ್ವೀಟ್ ಅನ್ನು ನಳಿನ್ ಕುಮಾರ್ ಈಚೆಗೆ ರಿಟ್ವೀಟ್ ಮಾಡಿದ್ದರು. ಅದಕ್ಕೆ ಪ್ರತಿಕ್ರಿಯಿಸಿದ್ದ ಕಾಂಗ್ರೆಸ್, ‘ಅಕ್ರಮ ಡಿನೋಟಿಫಿಕೇಷನ್'ನಂತಹ ಭೂ ಹಗರಣದವರು, ಅಕ್ರಮ ಗಣಿ ಹಗರಣದವರು, ಜೈಲಿಗೆ ಹೋಗಿ ಬಂದವರು ನಿಮ್ಮಲ್ಲೇ ಇದ್ದಾರೆ. ಒಂದು ಡಾಲರ್'ಗೆ 15 ರೂಪಾಯಿ ಮಾಡುತ್ತೇವೆಂದು ಅಮಾಯಕರ ದಾರಿ ತಪ್ಪಿಸುವ ಕಲೆ ನಿಮಗಿಂತ ಚೆನ್ನಾಗಿ ಇನ್ಯಾರಿಗೆ ತಿಳಿದಿರಲು ಸಾಧ್ಯ ಹೇಳಿ’ ಎಂದು ಟ್ವೀಟ್ ಮಾಡಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.