ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಲಾಲ್‌–ಜಟ್ಕಾ: ಯಾರಿಗೂ ಬಿಜೆಪಿ ಬೆಂಬಲ ಇಲ್ಲ ಎಂದ ನಳಿನ್‌ ಕುಮಾರ್‌ ಕಟೀಲ್‌

Last Updated 4 ಏಪ್ರಿಲ್ 2022, 20:08 IST
ಅಕ್ಷರ ಗಾತ್ರ

ಬೆಂಗಳೂರು: ‘ಸಮಾಜದಲ್ಲಿ ಈಗಿನ ಬೆಳವಣಿಗೆಗಳಿಗೂ ಬಿಜೆಪಿಗೂ ಯಾವುದೇ ಸಂಬಂಧವಿಲ್ಲ. ಹಲಾಲ್‌ ಕಟ್‌ ಮತ್ತು ಜಟ್ಕಾ ಕಟ್‌ ವಿಚಾರದಲ್ಲಿ ಬಿಜೆಪಿ ಯಾರನ್ನೂ ಬೆಂಬಲಿಸಿಲ್ಲ. ಆದರೆ, ಕಾಂಗ್ರೆಸ್‌ ಮತ್ತು ಜೆಡಿಎಸ್‌ ನಾಯಕರು ಈ ವಿಷಯವಾಗಿ ರಾಜಕೀಯ ಲಾಭ ಪಡೆಯಲು ಯತ್ನಿಸುತ್ತಿದ್ದಾರೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಆರೋಪಿಸಿದ್ದಾರೆ.

ಹಲಾಲ್‌ ಕಟ್‌ ಮತ್ತು ಜಟ್ಕಾ ಕಟ್‌ ವಿಚಾರದಲ್ಲಿ ಜನರು ತಮ್ಮದೇ ಆದ ನಿಲುವು ತೆಗೆದುಕೊಂಡಿದ್ದಾರೆ. ಬಿಜೆಪಿ ಈ ವಿಚಾರದಲ್ಲಿ ಯಾರನ್ನೂ ಬೆಂಬಲಿಸಿಲ್ಲ ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಹಿಜಾಬ್‌, ಹಲಾಲ್‌ ಕಟ್‌ ಮತ್ತು ಮಸೀದಿಗಳಲ್ಲಿ ಧ್ವನಿ ವರ್ಧಕ ಬಳಕೆ ಕುರಿತು ವಿರೋಧ ಪಕ್ಷಗಳ ನಾಯಕರಾದ ಎಚ್‌.ಡಿ.ಕುಮಾರಸ್ವಾಮಿ, ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್‌ ಅವರು ಓಲೈಕೆ ರಾಜಕಾರಣ ಬಿಟ್ಟು, ಸ್ಪಷ್ಟ ನಿಲುವು ವ್ಯಕ್ತಪಡಿಸಬೇಕು ಎಂದು ಒತ್ತಾಯಿಸಿದ್ದಾರೆ.

ಸುಳ್ಳಿನ ಸರದಾರರಾದ ಡಿ.ಕೆ.ಶಿವಕುಮಾರ್‌ ಮತ್ತು ಸಿದ್ದರಾಮಯ್ಯ ಅವರ ನಡುವಿನ ಶೀತಲ ಸಮರದಿಂದ ಕಾಂಗ್ರೆಸ್‌ ಪಕ್ಷ ನೆಲಕಚ್ಚಲಿದೆ. ಕೆಲವೇ ಜಿಲ್ಲೆಗಳಲ್ಲಿ ತನ್ನ ಅಸ್ತಿತ್ವವನ್ನು ಉಳಿಸಿಕೊಂಡಿರುವ ಜೆಡಿಎಸ್‌ ಕೂಡಾ ರಾಜ್ಯದಲ್ಲಿ ನಿರ್ನಾಮವಾಗಲಿದೆ. ಇದೇ ಆತಂಕದಿಂದ ಜೆಡಿಎಸ್‌ ನಾಯಕ ಕುಮಾರಸ್ವಾಮಿ ಅವರು ಬಿಜೆಪಿ ವಿರುದ್ಧ ಟೀಕೆ ಮಾಡುತ್ತಿದ್ದಾರೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT