ಬುಧವಾರ, ಫೆಬ್ರವರಿ 1, 2023
16 °C

ಭ್ರಷ್ಟಾಚಾರದ ರಕ್ತಬೀಜಾಸುರರನ್ನು ಹುಟ್ಟಿಸಿದ್ದೇ ಕಾಂಗ್ರೆಸ್: ಪ್ರಲ್ಹಾದ ಜೋಶಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಬ್ಬಳ್ಳಿ: ಭ್ರಷ್ಟಾಚಾರದ ರಕ್ತಬೀಜಾಸುರರನ್ನು ಹುಟ್ಟಿಸಿದ್ದೇ ಕಾಂಗ್ರೆಸ್ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆರೋಪಿಸಿದರು.

ಬಿಜೆಪಿ ಬ್ರೋಕರ್ ಪಾರ್ಟಿಯಾಗಿದ್ದು, ವಿಧಾನಸೌಧವೇ ಸರ್ಕಾರಿ ಕೆಲಸಗಳ ಮಾರಾಟದ ಶಾಪಿಂಗ್ ಮಾಲ್‌ ಎಂಬ ಕಾಂಗ್ರೆಸ್ ಶಾಸಕ ಪ್ರಿಯಾಂಕ ಖರ್ಗೆ ಅವರ ಹೇಳಿಕೆ ಕುರಿತ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಶುಕ್ರವಾರ ಪ್ರತಿಕ್ರಿಯಿಸಿದರು. ಕಾಂಗ್ರೆಸ್ ಪಕ್ಷ ಎಂದರೆ ಭ್ರಷ್ಟಾಚಾರ, ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಅವರ ಮನೆ ಎದುರು ಓಡಾಡುವವರನ್ನು ನೋಡಿದರೆ ಇದು ಸ್ಪಷ್ಟವಾಗುತ್ತದೆ. ಭ್ರಷ್ಟಾಚಾರ ಆರಂಭವಾಗಿದ್ದೇ ನೆಹರೂ ಕಾಲದಲ್ಲಿ ಎಂದರು.

ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಅವರನ್ನು ‘ನಾಯಿ ಮರಿ’ ಎಂದಿರುವ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಮಾಜಿ ಮುಖ್ಯಮಂತ್ರಿಯಾಗಿರುವ ಸಿದ್ದರಾಮಯ್ಯ ಅವರು ಘನತೆಯೊಂದಿಗೆ ಮಾತನಾಡಬೇಕು. ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಅವರು ಕಾಂಗ್ರೆಸ್ ಮುಖ್ಯಮಂತ್ರಿಗಳಿಗೆ ಮಾತನಾಡಲು ಸಮಯ ನೀಡುತ್ತಿರಲಿಲ್ಲ ಎಂದು ಅವರ ಪಕ್ಷದ ಮುಖಂಡರೇ ಹೇಳಿದ್ದಾರೆ ಎಂದರು.

ಮಲ್ಲಿಕಾರ್ಜುನ ಖರ್ಗೆ ಅವರು ಸಹ ಹೆಸರಿಗೆ ಮಾತ್ರ ಚುನಾಯಿತ ಅಧ್ಯಕ್ಷ, ಆದರೆ ಗಾಂಧಿ ಪರಿವಾರದ ಆಶೀರ್ವಾದದಿಂದ ಆ ಹುದ್ದೆಗೇರಿದ್ದಾರೆ ಎಂದರು.

ಇವನ್ನೂ ಓದಿ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು