ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಂಗ್ರೆಸ್ ತಿಪ್ಪರಲಾಗ ಹಾಕಿದರೂ ಅಧಿಕಾರಕ್ಕೆ ಬರದು: ಯಡಿಯೂರಪ್ಪ

Last Updated 18 ಸೆಪ್ಟೆಂಬರ್ 2022, 6:33 IST
ಅಕ್ಷರ ಗಾತ್ರ

ಹುಬ್ಬಳ್ಳಿ: 'ಕಾಂಗ್ರೆಸ್ ಎಷ್ಟೇ ತಿಪ್ಪರಲಾಗ ಹಾಕಿದರೂ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ. ನಾಡಿನ ಮತದಾರರು ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ಪರ ಇದ್ದಾರೆ' ಎಂದು ಶಾಸಕ ಬಿ.ಎಸ್. ಯಡಿಯೂರಪ್ಪ ಹೇಳಿದರು.

ನಗರದ ವಿಮಾನ ನಿಲ್ದಾಣದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್‌ನವರು ಭಾರತ ಜೊಡೋ ಮಾಡಲಿ, ರಥಯಾತ್ರೆಯೇ ನಡೆಸಲಿ. ಅಥವಾ ಎಷ್ಟೇ ಕಾರ್ಯತಂತ್ರ ರೂಪಿಸಿದರೂ ಅಧಿಕಾರಕ್ಕೆ ಬರಲು ಮಾತ್ರ ಸಾಧ್ಯವಿಲ್ಲ' ಎಂದರು.

'ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಚಾರ ನಡೆಸಲು ಸೆ. 22ರಂದು ನಾನು ರಾಜ್ಯದಾದ್ಯಂತ ಪ್ರವಾಸ ಮಾಡುತ್ತಿದ್ದೇನೆ' ಎಂದು ತಿಳಿಸಿದರು.

ಬಳ್ಳಾರಿ ವಿಮ್ಸ್‌ನಲ್ಲಿ ನಡೆದ ರೋಗಿಗಳ ಸಾವು ಪ್ರಕರಣದ ಕುರಿತು ಪ್ರತಿಕ್ರಿಯಿಸಿದ ಅವರು, 'ತನಿಖೆ ನಡೆಯುತ್ತಿದೆ, ನೋಡೋಣ' ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT