ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಂದಗಿ, ಹಾನಗಲ್ ಉಪಚುನಾವಣೆ: ಬಿಜೆಪಿಗೆ ಮಿಶ್ರ ಫಲಿತಾಂಶ ಎಂದ ಸಿ.ಟಿ.ರವಿ

Last Updated 2 ನವೆಂಬರ್ 2021, 10:11 IST
ಅಕ್ಷರ ಗಾತ್ರ

ಚಿಕ್ಕಮಗಳೂರು: ‘ರಾಜ್ಯದ ಎರಡು ಕ್ಷೇತ್ರಗಳ ಉಪಚುನಾವಣೆಗಳಲ್ಲಿ ಬಿಜೆಪಿಗೆ ಮಿಶ್ರ ಫಲಿತಾಂಶ ಲಭಿಸಿದೆ. ಜನಾದೇಶವನ್ನು ಸ್ವೀಕಾರ ಮಾಡುತ್ತೇವೆ’ ಎಂದು ಬಿಜೆಪಿ ರಾಷ್ಟ್ರೀಯ ಪ್ರದಾನ ಕಾರ್ಯದರ್ಶಿ ಸಿ.ಟಿ. ರವಿ ಪ್ರತಿಕ್ರಿಯಿಸಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ‘ಫಲಿತಾಂಶವನ್ನು ಮುಖ್ಯಮಂತ್ರಿ ಅಥವಾ ಆಡಳಿತ ಪಕ್ಷದ ವಿರುದ್ಧದ ಜನಾದೇಶ ಭಾವಿಸಿಲ್ಲ. ಹಾನಗಲ್‌ ಕ್ಷೇತ್ರದಲ್ಲಿ ಶ್ರೀನಿವಾಸ ಮಾನೆ ಅವರು ಈ ಹಿಂದೆ ಸೋತ ದಿನದಿಂದ ನಿರಂತರವಾಗಿ ಜನರ ಸಂಪರ್ಕದಲ್ಲಿ ಇದ್ದದ್ದು ಅವರ ಗೆಲುವಿಗೆ ಪೂರಕವಾಯಿತು. ನಾಮಪತ್ರ ಸಲ್ಲಿಕೆ ಕೊನೆಯ ದಿನದ ಹಿಂದಿನ ದಿನದವರೆಗೂ ಬಿಜೆಪಿ ಅಭ್ಯರ್ಥಿ ಆಯ್ಕೆ ಅಂತಿಮ ಮಾಡದಿದ್ದುದು ಸೋಲಿಗೆ ಭಾಗಶಃ ಪರಿಣಾಮ ಬೀರಿದೆ. ಬಿಜೆಪಿ ಅಭ್ಯರ್ಥಿ ಗೆಲುವಿಗಾಗಿ ಸರ್ವ ಪ್ರಯತ್ನ ಮಾಡಿದ್ದೆವು’ ಎಂದು ವಿಶ್ಲೇಷಿಸಿದರು.

‘ಸಿಂದಗಿ ಕ್ಷೇತ್ರದಲ್ಲಿ 31 ಸಾವಿರಕ್ಕೂ ಅಧಿಕ ಮತಗಳಿಂದ ಬಿಜೆಪಿ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ. ಹಾನಗಲ್‌ ಕ್ಷೇತ್ರದಲ್ಲಿ ವಿರೋಚಿತ ಹೋರಾಟ ಮಾಡಿದ್ದೇವೆ’ ಎಂದು ಅವರು ಹೇಳಿದರು.

‘ಜನತೆಯ ತೀರ್ಪಿಗೆ ನಾವು ಇವಿಎಂ ದೂರಲ್ಲ. ಒಂದು ವೇಳೆ ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಗೆದ್ದಿದ್ದರೆ ವಿಪಕ್ಷ ನಾಯಕರು ಇವಿಎಂ ದೂರುತ್ತಿದ್ದರು’ ಎಂದು ಕುಟುಕಿದರು.

‘ಒಂದು ಕಡೆ ಭರ್ಜರಿ ಗೆಲುವು ಸಿಕ್ಕಿದೆ. ಮತ್ತೊಂದು ಕಡೆ ಗೆಲ್ಲಲು ಆಗಿಲ್ಲ. ತಪ್ಪುಗಳು ಆಗಿದ್ದರೆ ಸರಿಪಡಿಸಿಕೊಳ್ಳುವ ಕೆಲಸ ಮಾಡುತ್ತೇವೆ. ತಪ್ಪುಸರಿಪಡಿಸಿಕೊಳ್ಳುವಿಕೆ ನಿರಂತರ ಪ್ರಕ್ರಿಯೆ’ ಎಂದು ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT