ಗುರುವಾರ , ಜೂನ್ 30, 2022
21 °C

ಕಾಂಗ್ರೆಸ್‌ಗೆ ಸಿದ್ದರಾಮಯ್ಯ ಒಲ್ಲದ ಕೂಸು‘- ಎನ್‌.ರವಿಕುಮಾರ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ’ಡಿ.ಕೆ.ಶಿವಕುಮಾರ್‌ ಕೆಪಿಸಿಸಿ ಅಧ್ಯಕ್ಷರಾದ ಮೇಲೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಹೈಕಮಾಂಡ್‌ಗೆ ಬೇಡದ ಕೂಸಾಗಿದ್ದಾರೆ‘ ಎಂದು ಬಿಜೆಪಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಎನ್‌.ರವಿಕುಮಾರ್ ಲೇವಡಿ ಮಾಡಿದ್ದಾರೆ.

’ಮೂಲೆಗುಂಪಾಗಿರುವ ಸಿದ್ದರಾಮಯ್ಯ ಅವರು ಎಐಸಿಸಿ ಮಾಜಿ ಅಧ್ಯಕ್ಷರಂತೆ ಹಗಲಿನಲ್ಲಿ ಒಂದು ರೀತಿ, ರಾತ್ರಿ ಮತ್ತೊಂದು ರೀತಿ ಮಾತನಾಡುತ್ತಾರೆ. ಕೋವಿಡ್‌ ಸಂದರ್ಭದಲ್ಲಿ ಕೀಳುಮಟ್ಟದ ರಾಜಕೀಯ ಮಾಡುತ್ತಿದ್ದಾರೆ‘ ಎಂದು ಅವರು ದೂರಿದ್ದಾರೆ.

‘ಮೊದಲು ಕೋವಿಡ್‌ ಲಸಿಕೆ ಬಗ್ಗೆ ಜನರಲ್ಲಿ ಭಯ, ಗೊಂದಲ ಹುಟ್ಟಿಸಿದ ಕಾಂಗ್ರೆಸ್‌ ನಾಯಕರು ಈಗ ಲಸಿಕೆ ಪಡೆಯಲು ಸಾಲಿನಲ್ಲಿ ನಿಲ್ಲುತ್ತಿದ್ದಾರೆ. ಸಿದ್ದರಾಮಯ್ಯ ಮೇಸ್ಟ್ರು ನಮಗೆ ಬೋಧನೆ ಮಾಡುವ ಬದಲು ರಾಜಸ್ಥಾನ ಮತ್ತು ಪಂಜಾಬ್‌ ಸರ್ಕಾರಗಳಿಗೆ ಲಸಿಕೆ ಹೇಗೆ ಬಳಸಬೇಕು ಮತ್ತು ಬಡವರಿಗೆ ಉಚಿತವಾಗಿ ಹೇಗೆ ನೀಡಬೇಕು ಎಂಬುದರ ಪಾಠ ಮಾಡಲಿ’ ಎಂದು ಹೇಳಿದ್ದಾರೆ.

 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು