ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರವೀಣ್ ಹತ್ಯೆ ಆರೋಪಿಗಳನ್ನು ಶಿಕ್ಷೆಗೆ ಗುರಿಪಡಿಸಲು ಸರ್ಕಾರ ಬದ್ದ: ಯಡಿಯೂರಪ್ಪ

ಅಕ್ಷರ ಗಾತ್ರ

ಬೆಂಗಳೂರು: ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಅವರ ಹತ್ಯೆ ಆರೋಪಿಗಳನ್ನು ಶಿಕ್ಷೆಗೆ ಗುರಿಪಡಿಸಲು ಸರ್ಕಾರ ಬದ್ದವಾಗಿದೆ ಎಂದು ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ತಿಳಿಸಿದ್ದಾರೆ.

ಈ ವಿಚಾರವಾಗಿ ಬುಧವಾರ ಟ್ವೀಟ್‌ ಮಾಡಿರುವ ಅವರು, ‘ನಮ್ಮ ಪಕ್ಷದ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರ ಬರ್ಬರ ಹತ್ಯೆ ಅತ್ಯಂತ ಆಘಾತ ಮತ್ತು ದುಃಖವನ್ನು ಉಂಟುಮಾಡಿದೆ. ದೇವರು ಅವರ ಆತ್ಮಕ್ಕೆ ಸದ್ಗತಿ ಕರುಣಿಸಲಿ, ಕುಟುಂಬದವರಿಗೆ ನೋವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಈ ಸಂದರ್ಭದಲ್ಲಿ ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತರು ಅವರ ಕುಟುಂಬದ ಜೊತೆಯಲ್ಲಿದ್ದಾರೆ’ ಎಂದು ಹೇಳಿದ್ದಾರೆ.

‘ಪ್ರವೀಣ್ ಹತ್ಯೆಯ ಹಿಂದೆ ಇರುವ ವಿಚ್ಛಿದ್ರಕಾರಿ ಶಕ್ತಿಗಳನ್ನು ಕೂಡಲೇ ಪತ್ತೆ ಹಚ್ಚಿ, ತಪ್ಪಿತಸ್ಥರಿಗೆ ಕಾನೂನು ರೀತಿ ಕಠಿಣ ಶಿಕ್ಷೆಗೆ ಗುರಿಪಡಿಸಲು ಸರ್ಕಾರ ಬದ್ದವಾಗಿದೆ. ಶಾಂತಿ ಕಾಪಾಡುವ ಜೊತೆಗೆ, ಸಮಾಜವಿರೋಧಿ ಶಕ್ತಿಗಳನ್ನು ಮಟ್ಟಹಾಕುವ ನಿಟ್ಟಿನಲ್ಲಿ ಸರ್ಕಾರದೊಂದಿಗೆ ಸಹಕರಿಸೋಣ’ ಎಂದು ಬಿಎಸ್‌ವೈ ಟ್ವೀಟಿಸಿದ್ದಾರೆ.

ಸುಳ್ಯ ತಾಲ್ಲೂಕಿನ ಬೆಳ್ಳಾರೆಯಲ್ಲಿ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು (32) ಎಂಬವರನ್ನು ಮಂಗಳವಾರ ರಾತ್ರಿ ಕೊಲೆ ಮಾಡಲಾಗಿದೆ.

ಪ್ರವೀಣ್ ಅವರು, ಬೆಳ್ಳಾರೆಯಲ್ಲಿ ಅಕ್ಷಯ ಕೋಳಿ ಅಂಗಡಿಯನ್ನು ನಡೆಸುತ್ತಿದ್ದರು. ಬಜರಂಗದಳವೂ ಸೇರಿದಂತೆ ಸಂಘ ಪರಿವಾರದ ಹಿಂದೂ ಸಂಘಟನೆಗಳಲ್ಲಿ ಸಕ್ರಿಯವಾಗಿದ್ದರು.

ಇವನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT