ಪ್ರವೀಣ್ ಹತ್ಯೆ ಎನ್‌ಐಎಗೆ; ಕೇಂದ್ರ ಗೃಹ ಸಚಿವಾಲಯ ಆದೇಶ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಬೆಳ್ಳಾರೆಯ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ (ಎನ್‌ಐಎ) ವಹಿಸಿ ಕೇಂದ್ರ ಗೃಹ ಸಚಿವಾಲಯ ಆದೇಶಿಸಿದೆ.
ಈ ಪ್ರಕರಣದ ತನಿಖೆಯನ್ನು ಎನ್‌ಐಎಗೆ ವಹಿಸುವಂತೆ ರಾಜ್ಯ ಸರ್ಕಾರ ಶಿಫಾರಸು ಮಾಡಿತ್ತು. ಕೇಂದ್ರ ಗೃಹ ಸಚಿವಾಲಯ ಆ.3ರಂದು ಈ ಬಗ್ಗೆ ಎನ್‌ಐಎ ಮಹಾನಿರ್ದೇಶಕರಿಗೆ ಆದೇಶ ನೀಡಿದೆ. ಪ್ರಕರಣ ಎನ್‌ಐಎ ಕಾಯ್ದೆ 2008ರ ಅಡಿಯಲ್ಲಿ ಬರುವ ಅಪರಾಧ ಎಂಬ ಅಭಿಪ್ರಾಯಕ್ಕೆ ಕೇಂದ್ರ ಬಂದಿದೆ. ಇದರ ಗಂಭೀರತೆ, ಮತ್ತದರ ಅಂತರ ರಾಜ್ಯ ಪರಿಣಾಮಗಳನ್ನು ಪರಿಗಣಿಸಿ, ಆದೇಶಿಸಲಾಗಿದೆ ಎಂದು ತಿಳಿಸಲಾಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.