ಸೋಮವಾರ, ಮಾರ್ಚ್ 27, 2023
21 °C

ರಾಹುಲ್ ಕನ್ನಡಿಗರ ಮನಸ್ಸು ಗೆಲ್ಲಲಾರರು: ಶೋಭಾ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಬ್ಬಳ್ಳಿ: ‘ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಬೆಳಗಾವಿ ಭೇಟಿಯಿಂದ, ಚುನಾವಣೆ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಕನ್ನಡ ನೆಲದ ಬಗ್ಗೆ ಏನೂ ಗೊತ್ತಿಲ್ಲದ ಅವರಿಗೆ ಕನ್ನಡಿಗರ ಮನಸ್ಸನ್ನು ಗೆಲ್ಲಲು ಸಾಧ್ಯವಿಲ್ಲ’ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ‌ ವಾಗ್ದಾಳಿ ನಡೆಸಿದರು.

ನಗರದ ವಿಮಾನ ನಿಲ್ದಾಣದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ರಾಹುಲ್ ಅವರು ನಡೆಸಿದ ಭಾರತ ಜೋಡೊ ಯಾತ್ರೆ ಸಂದರ್ಭದಲ್ಲೇ ಗುಜರಾತ್‌ನಲ್ಲಿ ನಡೆದ ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಜಯ ದಾಖಲಿಸಿತು. ಇತ್ತೀಚೆಗೆ ಈಶಾನ್ಯ ರಾಜ್ಯಗಳಲ್ಲೂ ಪಕ್ಷ ಅಧಿಕಾರ ಹಿಡಿದಿದೆ. ರಾಹುಲ್ ಯಾತ್ರೆ ಮತವಾಗಿ ಪರಿವರ್ತನೆಯಾಗಿಲ್ಲ’ ಎಂದರು

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು