ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚುನಾವಣೆಗಳ ಕುರಿತು ಬಿಜೆಪಿ ಪ್ರಮುಖರ ಸಮಿತಿ ಸಭೆಯಲ್ಲಿ ಚರ್ಚೆ: ಸಿಎಂ ಬೊಮ್ಮಾಯಿ

Last Updated 14 ಮೇ 2022, 5:41 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯಸಭೆ ಚುನಾವಣೆ, ವಿಧಾನ ಪರಿಷತ್‌ ಚುನಾವಣೆ ಹಾಗೂ ಇತರ ರಾಜಕೀಯ ಪರಿಸ್ಥಿತಿ ಕುರಿತು ಶನಿವಾರ ಮಧ್ಯಾಹ್ನ ನಡೆಯುವ ಬಿಜೆಪಿ ರಾಜ್ಯ ಪ್ರಮುಖರ ಸಮಿತಿ ಸಭೆಯಲ್ಲಿ ಚರ್ಚೆ ನಡೆಯಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಸುದ್ದಿಗಾರರ ಜತೆ ಶನಿವಾರ ಮಾತನಾಡಿದ ಅವರು, ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್‌. ಸಂತೋಷ್‌, ರಾಜ್ಯ ಉಸ್ತುವಾರಿ ಅರುಣ್‌ ಸಿಂಗ್‌, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್‌. ಯಡಿಯೂರಪ್ಪ, ಜಗದೀಶ ಶೆಟ್ಟರ್‌, ಡಿ.ವಿ. ಸದಾನಂದ ಗೌಡ ಸೇರಿದಂತೆ ಹಲವು ಪ್ರಮುಖರು ಸಭೆಯಲ್ಲಿ ಭಾಗವಹಿಸುತ್ತಾರೆ. ಚುನಾವಣೆಗಳ ಕುರಿತು ವಿಸ್ತೃತವಾಗಿ ಚರ್ಚೆ ನಡೆಯಲಿದೆ ಎಂದರು.

ರಾಜ್ಯಸಭೆ ಮತ್ತು ವಿಧಾನ ಪರಿಷತ್‌ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆಯ ಬಗ್ಗೆಯೂ ಚರ್ಚೆ ನಡೆಯಲಿದೆ. ಇತರ ರಾಜಕೀಯ ಬೆಳವಣಿಗೆಗಳ ಕುರಿತೂ ಚರ್ಚಿಸಲಾಗುವುದು ಎಂದು ತಿಳಿಸಿದರು.

ಇಂದು ನಿರ್ಧಾರ: ದಾವೋಸ್‌ನಲ್ಲಿ ನಡೆಯಲಿರುವ ವಿಶ್ವ ಆರ್ಥಿಕ ಶೃಂಗಸಭೆಗೆ ಭಾರತದಿಂದ ನಾನೂ ಸೇರಿದಂತೆ ಇಬ್ಬರು ಮುಖ್ಯಮಂತ್ರಿಗಳಿಗೆ ಮಾತ್ರ ಆಹ್ವಾನ ಬಂದಿದೆ. ಆದರೆ, ಇದೇ ಸಮಯದಲ್ಲಿ ಚುನಾವಣೆಗಳೂ ಎದುರಾಗಿವೆ. ಎಷ್ಟು ದಿನ ಶೃಂಗಸಭೆಯಲ್ಲಿ ಭಾಗವಹಿಸಬೇಕು ಎಂಬುದರ ಕುರಿತು ಶನಿವಾರವೇ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT