ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೇಜವಾಬ್ದಾರಿ ಹೇಳಿಕೆ ಬಿಜೆಪಿ ನಾಯಕರಿಗೆ ಶೋಭೆ ತರದು: ಶಾಸಕ ಎಚ್‌.ಕೆ.ಪಾಟೀಲ

Last Updated 15 ಆಗಸ್ಟ್ 2020, 11:16 IST
ಅಕ್ಷರ ಗಾತ್ರ

ಗದಗ: ‘ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರನ್ನು ಸಿಎಂ ಆಗಿ ಉಳಿಸಬೇಕೋ; ಇಳಿಸಬೇಕೋ ಎಂಬ ಚಟುವಟಿಕೆ ಅವರದ್ದೇ ‍ಪಕ್ಷದಲ್ಲಿ ನಡೆಯುತ್ತಿದೆ. ಇಂತಹ ಕೆಲಸದಲ್ಲಿ ತೊಡಗಿರುವ ಬಿಜೆಪಿ ನಾಯಕರು ಡಿ.ಜೆ. ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ಪಕ್ಷದ ಮೇಲೆ ಆರೋಪ ಮಾಡುವುದು ವಿವೇಕಹೀನ ನಡೆ’ ಎಂದು ಶಾಸಕ ಎಚ್‌.ಕೆ.ಪಾಟೀಲ ಲೇವಡಿ ಮಾಡಿದರು.

ಗದಗದಲ್ಲಿ ಶನಿವಾರ ಸ್ವಾತಂತ್ರ್ಯೋತ್ಸವದ ಬಳಿಕ ಮಾಧ್ಯಮದವರ ಜತೆಗೆ ಮಾತನಾಡಿದ ಅವರು, ‘ಬಿಜೆಪಿಯ ಹಿರಿಯ ನಾಯಕರು ಬೇಜವಾಬ್ದಾರಿಯಿಂದ ಹೇಳಿಕೆ ನೀಡುತ್ತಿದ್ದಾರೆ. ಕಾಂಗ್ರೆಸ್‌ ಮೇಲೆ ಆರೋಪ ಮಾಡುವ ಬದಲು ಈ ವಿಚಾರವಾಗಿ ಸಮಗ್ರ ತನಿಖೆ ಮಾಡಿಸಲಿ. ತಪ್ಪಿತಸ್ಥರಿಗೆ ಉಗ್ರ ಶಿಕ್ಷೆ ಕೊಡಿಸಲಿ’ ಎಂದು ತಿರುಗೇಟು ನೀಡಿದರು.

‘ಯಾವ ಯಾವ ಪ್ರಕರಣಗಳಲ್ಲಿ ಯಾರ‍್ಯಾರು ಸಿಕ್ಕಿಹಾಕಿಕೊಂಡಿದ್ದಾರೆ ಎಂಬುದು ರಾಜ್ಯದ ಜನರಿಗೆ ತಿಳಿದಿದೆ. ಅದು ಬಿಟ್ಟು, ತಮ್ಮ ತಪ್ಪುಗಳನ್ನು ಮುಚ್ಚಿಕೊಳ್ಳಲು ಇನ್ನೊಂದು ಪಕ್ಷದ ಮೇಲೆ ಆರೋಪ ಮಾಡುವುದು ಬಾಲಿಶತನವಾಗುತ್ತದೆ. ಕಾಂಗ್ರೆಸ್‌ ಪಕ್ಷ ಎಂದಿಗೂ ತಪ್ಪು ಹೆಜ್ಜೆ ಇಡುವುದಿಲ್ಲ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT