ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿ ಅಂದರೆ, ಬಿಸಿನೆಸ್‌ ಜನತಾ ಪಾರ್ಟಿ: ಮಧು ಬಂಗಾರಪ್ಪ

Last Updated 11 ಜನವರಿ 2023, 11:44 IST
ಅಕ್ಷರ ಗಾತ್ರ

ಬಾಗಲಕೋಟೆ: ಅಧಿಕಾರಿಗಳ ವರ್ಗಾವಣೆ, ಭಿವೃದ್ಧಿ ಕಾಮಗಾರಿಯಲ್ಲಿ ಕಮಿಷನ್‌ ಪಡೆಯುವ ಬಿಜೆಪಿ ನಾಯಕರಿಂದಾಗಿ ಅದು ಬಿಸಿನೆಸ್‌ ಜನತಾ ಪಾರ್ಟಿಯಾಗಿದೆ ಎಂದು ಕೆಪಿಸಿಸಿ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷ ಮಧು ಬಂಗಾರಪ್ಪ ಟೀಕಿಸಿದರು.

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಡವರ ಏಳ್ಗೆಯ ಕಾರ್ಯಕ್ರಮಗಳಿಗಿಂತ ಕಮಿಷನ್‌ ದೊರೆಯುವ ಕಾಮಗಾರಿಗಳಲ್ಲಿ ಸರ್ಕಾರ ಹೆಚ್ಚು ಆಸಕ್ತಿ ವಹಿಸುತ್ತಿದೆ ಎಂದು ಆರೋಪಿಸಿದರು.

ಬಿಜೆಪಿಯವರಿಗೆ ಸುಳ್ಳು ಹೇಳುವುದಕ್ಕೂ ವಿಷಯವಿಲ್ಲ. ಯುವಕರ ತಲೆಯಲ್ಲಿ ಹಿಂದುತ್ವ ತುಂಬಿ ಸಮಾಜದಲ್ಲಿ ದ್ವೇಷ ಮೂಡಿಸುತ್ತಿದ್ದಾರೆ. ಯುವಕರನ್ನು ಜೈಲುಗಳಲ್ಲಿ ಸಾಲಾಗಿ ನಿಲ್ಲುವಂತೆ ಮಾಡಿದ್ದಾರೆ. ಬಿಜೆಪಿಯ ಪಾಪದ ಕೊಡ ತುಂಬಿದೆ ಎಂದು ವಾಗ್ದಾಳಿ ನಡೆಸಿದರು.

ಗ್ರಾಮ ಪಂಚಾಯ್ತಿಗಳಲ್ಲಿ ಮನೆ ನಿರ್ಮಾಣ ಸಾಧ್ಯವಾಗದ್ದರಿಂದ ಬಿಜೆಪಿ ಗ್ರಾಮ ಪಂಚಾಯ್ತಿ ಸದಸ್ಯರೇ ಮನೆಗಳಿಂದ ಹೊರಬರಲಿಕ್ಕೆ ನಾಚಿಕೆ ಪಟ್ಟುಕೊಳ್ಳುತ್ತಿದ್ದಾರೆ. ಬಡವರಿಗೆ ಮನೆ ನಿರ್ಮಿಸಿಕೊಡಲು ಸಾಧ್ಯವಾಗುತ್ತಿಲ್ಲ. ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಅವರು ರೈತರ ಪಂಪ್‌ಸೆಟ್‌ಗಳಿಗೆ ನೀಡಿರುವ ಉಚಿತ ವಿದ್ಯುತ್ ಸೌಲಭ್ಯವನ್ನೂ ಕಿತ್ತುಕೊಳ್ಳಲು ರಾಜ್ಯ ಸರ್ಕಾರ ಯತ್ನಿಸುತ್ತಿದೆ ಎಂದು ಆರೋಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT