ಮಂಗಳವಾರ, ಜನವರಿ 25, 2022
28 °C

ಜ.7,8ಕ್ಕೆ ಬಿಜೆಪಿ ಚಿಂತನ ಸಭೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಚಿಕ್ಕಬಳ್ಳಾಪುರ ಜಿಲ್ಲೆಯ ನಂದಿ ಗಿರಿಧಾಮದಲ್ಲಿ ಇದೇ 7 ಮತ್ತು 8ರಂದು ಬಿಜೆಪಿ ರಾಜ್ಯ ಘಟಕದ ಚಿಂತನಾ ಸಭೆ ನಡೆಯಲಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್‌. ಸಂತೋಷ್‌ ಸೇರಿದಂತೆ ಹಲವು ಪ್ರಮುಖರು ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವರು, ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ ಕುಮಾರ್ ಕಟೀಲ್‌, ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ, ಪದಾಧಿಕಾರಿಗಳು ಮತ್ತು ಇತರ ಪ್ರಮುಖರು ಸಭೆಯಲ್ಲಿ ಪಾಲ್ಗೊಳ್ಳುವರು. ನಡ್ಡಾ ಅವರು ಮುಖ್ಯಮಂತ್ರಿ ಹಾಗೂ ಸಚಿವರ ಜತೆ ಪ್ರತ್ಯೇಕವಾಗಿ ಸಭೆ ನಡೆಸಿ ಪಕ್ಷ ಸಂಘಟನೆ ಕುರಿತು ಚರ್ಚಿಸಲಿದ್ದಾರೆ.

ಜ.8ರಂದು ಬಿಜೆಪಿ ರಾಜ್ಯ ಘಟಕದ ಪ್ರಮುಖರ ಸಮಿತಿಯ ಸಭೆಯೂ ನಿಗದಿಯಾಗಿದೆ ಎಂದು ಮೂಲಗಳು ಹೇಳಿವೆ. ಚಿಂತನ ಸಭೆಯಲ್ಲಿ ಭಾಗವಹಿಸುವಂತೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನೂ ಕೋರಲಾಗಿದೆ. ಆದರೆ, ಅಮಿತ್‌ ಶಾ ಭೇಟಿ ಇನ್ನೂ ಖಚಿತವಾಗಿಲ್ಲ ಎಂದು ಪಕ್ಷದ ಮುಖಂಡರು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು