ಮಂಗಳವಾರ, ಮಾರ್ಚ್ 9, 2021
31 °C
ವರಿಷ್ಠರು ಕರೆಸಿಲ್ಲ: ಭೇಟಿಯೂ ಮಾಡಿಲ್ಲ

ಅಂಜುವುದಿಲ್ಲ, ಬಗ್ಗುವುದೂ ಇಲ್ಲ ಮತ್ತು ಪಲಾಯನ ಇಲ್ಲವೇ ಇಲ್ಲ ಎಂದ ಬಸನಗೌಡ ಯತ್ನಾಳ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ

ಬೆಂಗಳೂರು: ದೆಹಲಿಗೆ ತುರ್ತು ಕಾರ್ಯದ ನಿಮಿತ್ತ ಬಂದಿದ್ದೇನೆಯೇ ಹೊರತು, ಪಕ್ಷದ ವರಿಷ್ಠರು ಬುಲಾವ್‌ ಮಾಡಿಲ್ಲ. ಭೇಟಿಗೆ ಸಮಯವನ್ನೂ ಪಡೆದಿಲ್ಲ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ತಿಳಿಸಿದ್ದಾರೆ.

ಪಕ್ಷದ ವರಿಷ್ಠರು ಕರೆಸಿ ಎಚ್ಚರಿಕೆ ನೀಡಿದ್ದಾರೆ ಎಂಬ ಸುದ್ದಿಗಳಿಗೆ ಫೇಸ್‌ಬುಕ್‌ ಮೂಲಕ ಪ್ರತಿಕ್ರಿಯೆ ನೀಡಿರುವ ಅವರು, ಭಾನುವಾರ ರಾತ್ರಿ ವಿಜಯಪುರದ ಸಿದ್ಧೇಶ್ವರ ಸಂಸ್ಥೆ ನಿರ್ಮಿಸಿರುವ ಭಾರತ ರತ್ನ ಅಟಲ ಬಿಹಾರಿ ವಾಜಪೇಯಿ ಶಿಶು ನಿಕೇತನ ಶಾಲೆಯ ಸಿಬಿಎಸ್‌ಇ ನೋಂದಣಿಯ ತುರ್ತು ಕೆಲಸ ಇದ್ದ ಕಾರಣ ದೆಹಲಿಗೆ ಬಂದಿದ್ದೆ ಎಂದು ಹೇಳಿದ್ದಾರೆ.

ನನಗೆ ಪಕ್ಷದ ಹೈಕಮಾಂಡ್‌ ಯಾವುದೇ ತುರ್ತು ಬುಲಾವ್‌ ಆಗಲಿ ಅಥವಾ ಸಮಯವನ್ನಾಗಲೀ ಕೊಟ್ಟು ನನ್ನ ವಿಚಾರಣೆಗೆ ಕರೆದಿಲ್ಲ. ನಾನು ಯಾವುದೇ ನಾಯಕರ ಭೇಟಿಗೂ ಸಮಯ ಕೇಳಿಲ್ಲ. ಆದರೆ ಮಾಧ್ಯಮಗಳಲ್ಲಿ ತಂದೆ ಮತ್ತು ಮಗ ಸುಳ್ಳು ಸುದ್ದಿ ಮಾಡಿಸಿ, ಬಲ್ಲ ಮೂಲಗಳಿಂದ ಹೇಳಿಸಿ ರಾಜ್ಯದ ಜನರಲ್ಲಿ, ಪಕ್ಷದ ಶಾಸಕರು ಮತ್ತು ಕಾರ್ಯಕರ್ತರಲ್ಲಿ ಗೊಂದಲ ಮೂಡಿಸಿದ್ದಾರೆ ಎಂದರು.

ನನ್ನ ಹೋರಾಟವು ನನ್ನ ಆದರ್ಶ ಗುರು ಅಟಲ್‌ ಬಿಹಾರಿ ವಾಜಪೇಯಿ ಮತ್ತು ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ ಅವರ ಸಂಕಲ್ಪದ ಕುಟುಂಬ ರಾಜಕಾರಣ ಮತ್ತು ಭ್ರಷ್ಟ ಮುಕ್ತ ಭಾರತದ ಭಾಗವಾಗಿದೆಯೇ ಹೊರತು ವೈಯಕ್ತಿಕ ವ್ಯಕ್ತಿ ವಿರುದ್ಧ ಅಲ್ಲ ಹಾಗೂ ಪಕ್ಷದ ವಿರುದ್ಧವೂ ಅಲ್ಲ ಎಂದು ಹೇಳಿದ್ದಾರೆ.

ಇಬ್ಬರು ಸಚಿವರು ಪತ್ರಿಕಾಗೋಷ್ಠಿ ನಡೆಸಿ ನನ್ನ ಬಗ್ಗೆ ಮತ್ತು ಸ್ವಾಮೀಜಿಯವರ ಬಗ್ಗೆ ಹಗುರವಾಗಿ ಮಾತನಾಡಿದ್ದಾರೆ. ಅದಕ್ಕೆ ಸೂಕ್ತ ಉತ್ತರವನ್ನು ಬಂದ ಮೇಲೆ ಕೊಡುತ್ತೇನೆ. ಹಿಂದೂ ಸಮಾಜದಲ್ಲಿನ ಸಾಮಾಜಿಕ ನ್ಯಾಯಕ್ಕಾಗಿ ನನ್ನ ಹೋರಾಟ ನಿಲ್ಲುವುದಿಲ್ಲ. ಅಂಜುವುದಿಲ್ಲ, ಬಗ್ಗುವುದೂ ಇಲ್ಲ ಮತ್ತು ಪಲಾಯನ ಇಲ್ಲವೇ ಇಲ್ಲ ಎಂದು ಹೇಳಿದ್ದಾರೆ.
 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು