ಶುಕ್ರವಾರ, ಡಿಸೆಂಬರ್ 4, 2020
22 °C
ಆರ್‌. ಶಂಕರ್, ಎಚ್‌. ವಿಶ್ವನಾಥ್‌, ಎಂ.ಟಿ.ಬಿ. ನಾಗರಾಜ್‌ ಪ್ರಕರಣ

ವಿಧಾನ ಪರಿಷತ್‌ ಸದಸ್ಯರ ಸಂಪುಟ ಸೇರ್ಪಡೆಗೆ ಹೈಕೋರ್ಟ್‌ ಆದೇಶದ ಮಿತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಿಧಾನಸಭೆ–ಸಾಂದರ್ಭಿಕ ಚಿತ್ರ

ಬೆಂಗಳೂರು: ವಿಧಾನ ಪರಿಷತ್‌ ಸದಸ್ಯರಾದ ಆರ್‌. ಶಂಕರ್‌, ಎ.ಎಚ್‌. ವಿಶ್ವನಾಥ್‌ ಮತ್ತು ಎಂ.ಟಿ.ಬಿ. ನಾಗರಾಜ್‌ ಅವರ ಸಂಪುಟ ಸೇರ್ಪಡೆ ಸೇರಿದಂತೆ ಅವರ ಕುರಿತಾಗಿ ರಾಜ್ಯ ಸರ್ಕಾರವು ಕೈಗೊಳ್ಳುವ ಯಾವುದೇ ನಿರ್ಧಾರವು ಅವರ ಆಯ್ಕೆಯನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ಬಳಿಕ ಹೈಕೋರ್ಟ್‌ ನೀಡುವ ಆದೇಶದ ವ್ಯಾಪ್ತಿಗೆ ಒಳಪಟ್ಟಿರುತ್ತದೆ ಎಂದು ನ್ಯಾಯಾಲಯ ಬುಧವಾರ ಹೇಳಿದೆ.

ಮೂವರನ್ನೂ ವಿಧಾನ ಪರಿಷತ್‌ ಸದಸ್ಯರನ್ನಾಗಿ ನೇಮಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ಮುಖ್ಯ ನ್ಯಾಯಮೂರ್ತಿ ಅಭಯ್‌ ಶ್ರೀನಿವಾಸ್‌ ಓಕಾ ನೇತೃತ್ವದ ವಿಭಾಗೀಯ ಪೀಠದಲ್ಲಿ ನಡೆಯಿತು.

ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ಪ್ರಶಾಂತ್‌ ಭೂಷಣ್‌, ‘ಲಭ್ಯವಿರುವ ಮಾಹಿತಿ ಪ್ರಕಾರ ಮೂವರನ್ನೂ ಸಚಿವರನ್ನಾಗಿ ನೇಮಿಸುವ ಸಾಧ್ಯತೆ ಇದೆ. ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳದಂತೆ ಆದೇಶ ಹೊರಡಿಸಬೇಕು’ ಎಂದು ಕೋರಿದರು. ಆಗ ವಿಭಾಗೀಯ ಪೀಠ, ಮುಂದಿನ ಯಾವುದೇ ನಿರ್ಧಾರ ತನ್ನ ಆದೇಶದ ವ್ಯಾಪ್ತಿಗೆ ಒಳಪಟ್ಟಿರಲಿದೆ ಎಂದು ತಿಳಿಸಿತು.

ನ.19ಕ್ಕೆ ವಿಚಾರಣೆ ಮುಂದೂಡಿದ ವಿಭಾಗೀಯ ಪೀಠ, ಅರ್ಜಿದಾರರ ಆರೋಪಗಳಿಗೆ ಸಂಬಂಧಿಸಿದಂತೆ ಮುಂದಿನ ವಿಚಾರಣೆಯ ಒಳಗಾಗಿ ಆಕ್ಷೇಪಣೆ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿತು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು