ಭಾನುವಾರ, ಸೆಪ್ಟೆಂಬರ್ 19, 2021
30 °C

ಶ್ರೀಮಂತ ಪಾಟೀಲ್‌ ಹೇಳಿಕೆ ಬಗ್ಗೆ ಎಸಿಬಿ ಪ್ರಕರಣ ದಾಖಲಿಸಿ ತನಿಖೆ ನಡೆಸಲಿ: ಡಿಕೆಶಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಳಗಾವಿ: ‘ಕಾಂಗ್ರೆಸ್‌ನಿಂದ ಬರಲು ಬಿಜೆಪಿಯವರು ಹಣದ ಆಫರ್ ನೀಡಿದ್ದರು’ ಎಂದು ಬಿಜೆಪಿ ಶಾಸಕ ಶ್ರೀಮಂತ ಪಾಟೀಲ ಸತ್ಯವಾದ ಮಾತನ್ನೇ ಹೇಳಿದ್ದಾರೆ. ಹಣದ ಆಮಿಷ ಒಡ್ಡಿದವರು ಯಾರು? ಎನ್ನುವುದನ್ನು ತನಿಖೆ ನಡೆಸಬೇಕು’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಒತ್ತಾಯಿಸಿದ್ದಾರೆ.

‘ಈ ಹೇಳಿಕೆಗಾಗಿ ಶ್ರೀಮಂತಪಾಟೀಲ ಅವರನ್ನು ಅಭಿನಂದಿಸುತ್ತೇನೆ.ಹಾಲಿ ಶಾಸಕ ಹಾಗೂ ಮಾಜಿ ಸಚಿವರಾಗಿರುವ ಅವರ ಮಾತನ್ನು ಗಂಭೀರವಾಗಿ ಪರಿಗಣಿಸಬೇಕು. ಎಸಿಬಿಯವರು ಕೂಡಲೇ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಳ್ಳಬೇಕು ಎಂದು ಒತ್ತಾಯಿಸಿದರು.

‘ದೇಶ ಹಾಗೂ ರಾಜ್ಯದಲ್ಲಿ ಬಿಜೆಪಿ ಆಡಳಿತ ಸರಿ ಇಲ್ಲ ಎನ್ನುವುದಕ್ಕೆ ಕೆಲವೆಡೆ ಮುಖ್ಯಮಂತ್ರಿಗಳನ್ನು ಬದಲಾವಣೆ ಮಾಡುತ್ತಿರುವುದೇ ಸಾಕ್ಷಿಯಾಗಿದೆ’ ಎಂದು ಆರೋಪಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು