ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯಕ್ಕೆ ದೌರ್ಭಾಗ್ಯ ತಂದವರು ಸಿದ್ದರಾಮಯ್ಯ: ಪ್ರತಾಪ ಸಿಂಹ

ಮೈಸೂರು ಸಂಸದ ಪ್ರತಾಪ ಸಿಂಹ ತಿರುಗೇಟು
Last Updated 28 ನವೆಂಬರ್ 2020, 8:28 IST
ಅಕ್ಷರ ಗಾತ್ರ

ಚಿತ್ರದುರ್ಗ: ಸಾಲ ಮಾಡಿ ಎಲ್ಲ ಭಾಗ್ಯಗಳನ್ನು ಕೊಟ್ಟು ಕರ್ನಾಟಕಕ್ಕೆ ದೌರ್ಭಾಗ್ಯ ತಂದವರು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ. ರಾಜ್ಯದ ಆರ್ಥಿಕ ಸ್ಥಿತಿಯ ಬಗ್ಗೆ ಮಾತನಾಡುವ ನೈತಿಕತೆಯನ್ನು ಅವರು ಉಳಿಸಿಕೊಂಡಿಲ್ಲ ಎಂದು ಮೈಸೂರು ಸಂಸದ ಪ್ರತಾಪ ಸಿಂಹ ತಿರುಗೇಟು ನೀಡಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘2013ರಲ್ಲಿ ರಾಜ್ಯದ ಸಾಲ ₹ 1.31 ಲಕ್ಷ ಕೋಟಿ ಇತ್ತು. 2018ರಲ್ಲಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಹುದ್ದೆಯಿಂದ ಕೆಳಗೆ ಇಳಿಯುವಾಗ ಸಾಲದ ಮೊತ್ತ ₹ 2.86 ಲಕ್ಷ ಕೋಟಿ ತಲುಪಿತ್ತು. ರಾಜ್ಯದ ಎಲ್ಲ ಮುಖ್ಯಮಂತ್ರಿಗಳು ಮಾಡಿದ ಸಾಲವನ್ನು ದ್ವಿಗುಣಗೊಳಿಸಿದ ಶ್ರೇಯಸ್ಸು ಸಿದ್ದರಾಮಯ್ಯ ಅವರಿಗೆ ಸಲ್ಲಬೇಕು’ ಎಂದು ವ್ಯಂಗ್ಯವಾಡಿದರು.

‘ಕರಾವಳಿ ಭಾಗದಲ್ಲಿ ದೊಡ್ಡಮಟ್ಟದ ದೇಶ ವಿರೋಧಿ ಚಟುವಟಿಕೆಗಳು ನಡೆಯುತ್ತಿವೆ. ಇದಕ್ಕೆ ರಿಯಾಜ್‌ ಭಟ್ಕಾಳ್‌ ಹಾಗೂ ಯಾಸೀನ್‌ ಭಟ್ಕಾಳ್‌ ಕುಮ್ಮಕ್ಕು ಇದೆ. ಕೇರಳ ಮಾದರಿಯ ಕೊಲೆಗಳು ಮಂಗಳೂರಿನಲ್ಲಿ ನಡೆಯುತ್ತಿವೆ. ಭಯೋತ್ಪಾದನೆಯನ್ನು ಕಿತ್ತೆಸೆಯಲು ಮುಖ್ಯಮಂತ್ರಿ ಹಾಗೂ ಗೃಹ ಸಚಿವರು ಕರಾವಳಿಗೆ ಹೆಚ್ಚು ಗಮನ ಕೊಡುವ ಅಗತ್ಯವಿದೆ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT