ಗುರುವಾರ , ಡಿಸೆಂಬರ್ 1, 2022
27 °C

ನಾಳೆ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ ಇದೇ ಶುಕ್ರವಾರ (ಅ.7) ಅರಮನೆ ಮೈದಾನದಲ್ಲಿ ನಡೆಯಲಿದ್ದು, ಮುಂಬರುವ ದಿನಗಳಲ್ಲಿ ಜನಸ್ಪಂದನ ಮತ್ತು ರಾಜ್ಯ ನಾಯಕರ ಜಿಲ್ಲಾ ಪ್ರವಾಸಗಳನ್ನು ನಡೆಸುವ ಬಗ್ಗೆ ತೀರ್ಮಾನಿಸಲಾಗುವುದು.

ಈಗಾಗಲೇ ದೊಡ್ಡಬಳ್ಳಾಪುರದಲ್ಲಿ ಮೊದಲ ಜನಸ್ಪಂದನ ನಡೆದಿದ್ದು, ಉಳಿದ ಜನಸ್ಪಂದನ ಸಮಾವೇಶಗಳ ದಿನಾಂಕ ನಿಗದಿಯಾಗಬೇಕಾಗಿದೆ. ಪಕ್ಷದ ಸಂಘಟನೆ ಮತ್ತು ಜನಸಂಪರ್ಕಕ್ಕೆ ಸಂಬಂಧಿಸಿದಂತೆ ಹೊಣೆಗಾರಿಕೆ ಹಂಚಿಕೆಯ ವಿಚಾರವನ್ನೂ ತೀರ್ಮಾನಿಸಲಾಗುವುದು. ಈ ಸಭೆಗೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ಆಹ್ವಾನಿಸಲು ಉದ್ದೇಶಿಸಲಾಗಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.

ಪ್ರತಿ ಎರಡು ತಿಂಗಳಿಗೊಮ್ಮೆ ರಾಜ್ಯ ಇತರ ಜಿಲ್ಲೆಗಳಲ್ಲಿ ರಾಜ್ಯ ಕಾರ್ಯಕಾರಿಣಿ ಸಭೆ ನಡೆಸಲಾಗಿತ್ತು. ಈ ಬಾರಿ ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿದೆ. ಇದರಲ್ಲಿ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್‌ಸಿಂಗ್ ಅವರು ಭಾಗವಹಿಸಲಿದ್ದಾರೆ. ಗುರುವಾರ ಸಂಜೆ ನಗರಕ್ಕೆ ಬರುವ ಅವರು, ಸಂಜೆ ಪಕ್ಷದ ಕಚೇರಿಯಲ್ಲಿ ನಡೆಯುವ ರಾಜ್ಯ ಪ್ರಧಾನ ಕಾರ್ಯದರ್ಶಿಗಳ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು