ಗುರುವಾರ , ಡಿಸೆಂಬರ್ 1, 2022
21 °C

ಭಾರತ್ ಜೋಡೊ ಯಾತ್ರೆಗೆ ಬಿಜೆಪಿ ಹೆದರುವುದಿಲ್ಲ: ಸಚಿವ ಅಶ್ವತ್ಥನಾರಾಯಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ‘ಕಾಂಗ್ರೆಸ್‌ನವರು ನಡೆಸುತ್ತಿರುವ ಭಾರತ್ ಜೋಡೊ ಯಾತ್ರೆಗೆ ಬಿಜೆಪಿ ಹೆದರುವುದಿಲ್ಲ’ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು.

ಇಲ್ಲಿ ಪತ್ರಕರ್ತರೊಂದಿಗೆ ಶುಕ್ರವಾರ ಮಾತನಾಡಿದ ಅವರು, ‘ದೇಶ ಒಡೆಯುವ ಯಾತ್ರೆ ಅದಾಗಿದೆ. ಚೂರಾಗಿರುವ ಕಾಂಗ್ರೆಸ್ ಅನ್ನು ಅದನ್ನು ಜೋಡಿಸಿಕೊಳ್ಳಲಿ. ದೇಶ ಒಡೆದವರೇ ಈಗ ಜೋಡಿಸುತ್ತೇವೆ ಎನ್ನುತ್ತಿದ್ದಾರೆ’ ಎಂದು ವ್ಯಂಗ್ಯವಾಡಿದರು.

‘ಯಾತ್ರೆಯಿಂದ ಕಾಂಗ್ರೆಸ್‌ಗೆ ಲಾಭವಾಗುವುದಿಲ್ಲ. ರಾಹುಲ್ ಹೋದಲ್ಲೆಲ್ಲಾ ಕಾಂಗ್ರೆಸ್ ಸೋಲು ಕಂಡಿದೆ’ ಎಂದರು.

‘ಗುಂಡ್ಲುಪೇಟೆಯಲ್ಲಿ ಕಾಂಗ್ರೆಸ್ ಫ್ಲೆಕ್ಸ್ ಹರಿದ ವಿಚಾರವಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಮುಖ್ಯಮಂತ್ರಿಗೆ ಎಚ್ಚರಿಕೆ ನೀಡಿರುವುದು ಸರಿಯಲ್ಲ. ಡಿಕೆಶಿ ಮಾನಸಿಕ ಅಸ್ವಸ್ಥರಂತೆ ಮಾತನಾಡುತ್ತಿದ್ದಾರೆ. ಅವರ ಗೂಂಡಾಗಿರಿಗೆಲ್ಲ ನಾವು ಜಗ್ಗುವುದಿಲ್ಲ. ಆಗಿರುವ ತಪ್ಪನ್ನು ಸರಿಪಡಿಸಿ ಎಂದು ಹೇಳಬೇಕು. ಅದನ್ನು ಬಿಟ್ಟು ಪ್ರಚೋದನೆ ನೀಡುವುದು ಸರಿಯಲ್ಲ’ ಎಂದು ಪ್ರತಿಕ್ರಿಯಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು