ಭಾನುವಾರ, 4 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿಯಿಂದ ನನಗೆ ಅಪಮಾನ ಕೇವಲ ಅಪಪ್ರಚಾರ: ಯಡಿಯೂರಪ್ಪ

Last Updated 20 ಮಾರ್ಚ್ 2023, 15:18 IST
ಅಕ್ಷರ ಗಾತ್ರ

ಚಿತ್ರದುರ್ಗ: ತಮ್ಮನ್ನು ಬಿಜೆಪಿ ಅಪಮಾನಿಸಿರುವುದಾಗಿ ಅಪಪ್ರಚಾರ ಮಾಡಲಾಗುತ್ತಿದೆ. ಇದು ಕಾಂಗ್ರೆಸ್‌ ಹುನ್ನಾರವಾಗಿದ್ದು, ವೀರಶೈವ ಲಿಂಗಾಯತ ಸಮುದಾಯದ ಬಾಂಧವರು ಅರ್ಥ ಮಾಡಿಕೊಳ್ಳಬೇಕು ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್‌.ಯಡಿಯೂರಪ್ಪ ಹೇಳಿದರು.

ಇಲ್ಲಿನ ಹಳೆ ಮಾಧ್ಯಮಿಕ ಶಾಲಾ ಮೈದಾನದಲ್ಲಿ ಸೋಮವಾರ ರಾತ್ರಿ ನಡೆದ ವಿಜಯ ಸಂಕಲ್ಪ ಯಾತ್ರೆಯಲ್ಲಿ ಅವರು ಮಾತನಾಡಿದರು.

‘ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು ನನ್ನ ಸ್ವಂತ ನಿರ್ಧಾರ. ಮುಂದಿನ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂಬುದು ನನ್ನ ನಿರ್ಧಾರ. ಇದರ ಹಿಂದೆ ಯಾವ ಒತ್ತಡವೂ ಇಲ್ಲ. ಇದೇ ವಿಚಾರವನ್ನು ಮುಂದಿಟ್ಟುಕೊಂಡು ಅಪ್ರಪ್ರಚಾರ ಮಾಡಲಾಗುತ್ತಿದೆ. ಇದಕ್ಕೆ ಯಾರೂ ಕಿವಿಗೊಡಬಾರದು’ ಎಂದು ಮನವಿ ಮಾಡಿದರು.

‘ನನಗೀಗ 80 ವರ್ಷ. ಆದರೂ ಮನೆಯಲ್ಲಿ ಕೂರುವುದಿಲ್ಲ. ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರುವುದು ನನ್ನ ಸಂಕಲ್ಪ. ಮುಂದಿನ ಎರಡು ಚುನಾವಣೆಗಳಿಗೆ ಪಕ್ಷಕ್ಕಾಗಿ ಕೆಲಸ ಮಾಡುತ್ತೇನೆ. ವಿಶ್ರಾಂತಿ ಪಡೆಯದೇ ದುಡಿಯುತ್ತೇನೆ. ನನ್ನೊಂದಿಗೆ ಕಾರ್ಯಕರ್ತರು ಕೈಜೋಡಿಸಿ’ ಎಂದು ಕೋರಿಕೊಂಡರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT