ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಡ್ಡಾಗೂ ರಾಜಕೀಯ ಜ್ಞಾನ ಇಲ್ಲ: ಸಿದ್ದರಾಮಯ್ಯ

Last Updated 22 ಫೆಬ್ರುವರಿ 2023, 22:00 IST
ಅಕ್ಷರ ಗಾತ್ರ

ಚಿತ್ರದುರ್ಗ: ‘ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ಕುಮಾರ್ ಕಟೀಲ್‌ಗೆ ಮಾತ್ರ ರಾಜಕೀಯ ಪರಿಜ್ಞಾನ ಇಲ್ಲ ಅಂದುಕೊಂಡಿದ್ದೆ. ಆದರೆ, ಈಗ ಅರ್ಥವಾಗುತ್ತಿದೆ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗೂ ರಾಜಕೀಯ ಜ್ಞಾನವಿಲ್ಲ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕುಟುಕಿದರು.

‘ಕಾಂಗ್ರೆಸ್ ಪಕ್ಷಕ್ಕೆ ಸಿದ್ಧಾಂತ ಇಲ್ಲ. ಸಿದ್ದರಾಮಯ್ಯ ಕಡು ಭ್ರಷ್ಟ’ ಎಂಬ ಜೆ.ಪಿ.ನಡ್ಡಾ ಅವರ ಆರೋಪಕ್ಕೆ ಬುಧವಾರ ಪ್ರತಿಕ್ರಿಯಿಸಿದ ಅವರು, ‘ಬಿಜೆಪಿಗೇ ಸಿದ್ಧಾಂತ ಇಲ್ಲ. ಜನರನ್ನು ಪ್ರಚೋದಿಸಿ, ದ್ವೇಷ ರಾಜಕಾರಣ ಮಾಡುವುದು ಹಾಗೂ ಸಿದ್ದರಾಮಯ್ಯ ಅವರನ್ನು ಮುಗಿಸಿ ಎನ್ನುವುದು ಅವರ ಸಿದ್ಧಾಂತ’ ಎಂದರು.

‘ಶುದ್ಧ ಕುಡಿಯುವ ನೀರಿನ ಘಟಕಗಳಲ್ಲಿ ಭಾರಿ ಅವ್ಯವಹಾರ ಆಗಿದ್ದರೆ ತನಿಖೆ ಮಾಡಿಸಿ. ನಮ್ಮ ಕಾಲದಲ್ಲಿ ಭ್ರಷ್ಟಾಚಾರ ನಡೆದಿದೆ ಎನ್ನುವ ದಾಖಲೆ ಇದ್ದರೆ ಕ್ರಮ ಕೈಗೊಳ್ಳಿ. ನೀವೇ ಅಧಿಕಾರದಲ್ಲಿದ್ದೀರಿ, ನಿಮ್ಮ ಕೈ ಯಾರು ಹಿಡಿದಿದ್ದಾರೆ, ಏಕೆ ಹಿಂದೇಟು ಹಾಕುತ್ತೀರಿ’ ಎಂದು ಅವರು ಪ್ರಶ್ನಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT