ಶನಿವಾರ, ಮೇ 15, 2021
26 °C
ಟ್ವಿಟರ್‌ನಲ್ಲಿ ಬಿಜೆಪಿ ರಾಜ್ಯ ಘಟಕದ ಪ್ರಶ್ನೆ

ಬೆಳಗಾವಿ ವಿಚಾರದಲ್ಲಿನ ಶಿವಸೇನೆ ಹೇಳಿಕೆಗೆ ಕಾಂಗ್ರೆಸ್‌ ನಿಲುವೇನು?: ಬಿಜೆಪಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಬೇಕು ಎಂಬ ಶಿವಸೇನೆಯ ಹೇಳಿಕೆ ವಿಚಾರದಲ್ಲಿ ಕಾಂಗ್ರೆಸ್‌ ಪಕ್ಷದ ನಿಲುವು ಏನು ಎಂದು ಬಿಜೆಪಿ ರಾಜ್ಯ ಘಟಕ ಟ್ವಿಟರ್‌ನಲ್ಲಿ ಪ್ರಶ್ನಿಸಿದೆ.

‘ಬೆಳಗಾವಿಯು ಕರ್ನಾಟಕ ಆಕ್ರಮಿತ ಮಹಾರಾಷ್ಟ್ರ’ ಎಂಬ ಅಲ್ಲಿನ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಹೇಳಿಕೆ ಕುರಿತು ಶುಕ್ರವಾರ ಸರಣಿ ಟ್ವೀಟ್‌ ಮಾಡಿರುವ ಬಿಜೆಪಿ ರಾಜ್ಯ ಘಟಕ, ‘ಪಕ್ಕದ ರಾಜ್ಯದಲ್ಲಿ ಶಿವಸೇನೆ ಮತ್ತು ಕಾಂಗ್ರೆಸ್‌ ಮೈತ್ರಿಯಲ್ಲಿವೆ. ಬೆಳಗಾವಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಮತ್ತು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಚುನಾವಣೆ ಪ್ರಚಾರ ನಡೆಸುತ್ತಿದ್ದಾರೆ. ಶಿವಸೇನೆ ಹೇಳಿಕೆ ಕುರಿತು ತಮ್ಮ ನಿಲುವು ತಿಳಿಸಲಿ’ ಎಂದು ಆಗ್ರಹಿಸಿದೆ.

‘ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಲಿ ಎಂದು ಕಾಂಗ್ರೆಸ್‌ನ ಮಿತ್ರಪಕ್ಷವನ್ನು ಪ್ರತಿನಿಧಿಸುವ ಮುಖ್ಯಮಂತ್ರಿಯೇ ಹೇಳಿದ್ದಾರೆ. ಈ ಬಗ್ಗೆ ಕಾಂಗ್ರೆಸ್‌ ನಾಯಕರು ಧ್ವನಿ ಎತ್ತದೆ ಅಲ್ಲಿನ ಸರ್ಕಾರದ ಜತೆ ಹೊಂದಾಣಿಕೆ ರಾಜಕಾರಣ ಮಾಡುತ್ತಿರುವುದೇಕೆ? ಬೆಳಗಾವಿ ನಮ್ಮದು ಎಂದು ಸಂಸತ್ತಿನಲ್ಲೇ ಹೇಳಿದ ಶಿವಸೇನೆ ಜತೆ ಕಾಂಗ್ರೆಸ್‌ ಮೈತ್ರಿಯಲ್ಲಿದೆ. ಶಿವಸೇನೆ ಸಂಸದನ ಮಾತನ್ನು ಕೆಪಿಸಿಸಿ ಅಧ್ಯಕ್ಷರು ವಿರೋಧಿಸುತ್ತಾರಾ? ಪುರಸ್ಕರಿಸುತ್ತಾರಾ?’ ಎಂದು ಬಿಜೆಪಿ ಕೇಳಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು