ಬೆಂಗಳೂರು: ಬಿಜೆಪಿಯವರು ಸಂವಿಧಾನ ವಿರೋಧಿಸುತ್ತಿದ್ದಾರೆ ಎಂಬ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಟೀಕೆಗೆ ಆಡಳಿತಾರೂಢ ಪಕ್ಷ ತೀಕ್ಷ್ಣವಾಗಿ ತಿರುಗೇಟು ನೀಡಿದೆ.

ಸಂವಿಧಾನ ಶಿಲ್ಪಿ ಬಿ.ಆರ್.ಅಂಬೇಡ್ಕರ್ ಅವರಿಗೆ ಕಾಂಗ್ರೆಸ್ ಸರ್ಕಾರ ಮಾಡಿದ್ದ ಅನ್ಯಾಯವನ್ನು ಮರೆತುಬಿಟ್ಟಿದ್ದೀರಾ ಎಂದು ಬಿಜೆಪಿ ಪ್ರಶ್ನಿಸಿದೆ.

ಓದಿ:ಕಾಂಗ್ರೆಸ್ ಸೇರುವ ಇಂಗಿತ; ಜಿ.ಟಿ.ದೇವೇಗೌಡ ಚರ್ಚಿಸಿದ್ದು ನಿಜ– ಸಿದ್ದರಾಮಯ್ಯ

‘ಸುಳ್ಳುಗಳ ಸರದಾರ ಸಿದ್ದರಾಮಯ್ಯ ಅವರೇ, ಸಂವಿಧಾನ ಬರೆದ ಅಂಬೇಡ್ಕರ್ ಅವರಿಗೆ ಜವಹರಲಾಲ್ ನೆಹರೂ ನೇತೃತ್ವದ ಕಾಂಗ್ರೆಸ್ ಮಾಡಿದ ಅನ್ಯಾಯವನ್ನು ಮರೆತು ಬಿಟ್ಟಿರಾ? ಅಂಬೇಡ್ಕರ್ ಅವರನ್ನು ಚುನಾವಣೆಯಲ್ಲಿ ಸೋಲಿಸಲು ಕಾಂಗ್ರೆಸ್ ಮಾಡಿದ ಕುತಂತ್ರಗಳ ಪಟ್ಟಿ ಕೊಡಬೇಕೇ?’ ಎಂದು ಬಿಜೆಪಿ ಟ್ವೀಟ್ ಮಾಡಿದೆ.

ಓದಿ:ಜಾತಿ ಜನಗಣತಿ ನಡೆಸುವುದರಿಂದ ಅರ್ಹರಿಗೆ ಮೀಸಲಾತಿ ಒದಗಿಸಲು ಸಾಧ್ಯ- ಸಿದ್ದರಾಮಯ್ಯ

ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಮಂಗಳವಾರ ಸರಣಿ ಟ್ವೀಟ್ ಮಾಡಿದ್ದ ಸಿದ್ದರಾಮಯ್ಯ, ‘ಅಂಬೇಡ್ಕರ್ ಬರೆದಿರುವ ಸಂವಿಧಾನವನ್ನು ಜವಾಹರಲಾಲ್ ನೆಹರೂ, ಇಂದಿರಾಗಾಂಧಿ ಸೇರಿ ಎಲ್ಲಾ ಕಾಂಗ್ರೆಸ್ ನಾಯಕರು ಒಪ್ಪಿಕೊಂಡರು. ಸಮಾನತೆ, ಭಾತೃತ್ವ ಮತ್ತು ಜಾತ್ಯತೀತತೆಯ ಶತ್ರುಗಳಾದ ಬಿಜೆಪಿಯವರು ಸಂವಿಧಾನ ವಿರೋಧಿಸುತ್ತಿದ್ದಾರೆ. ಈ ಹುನ್ನಾರಗಳನ್ನು ವಿದ್ಯಾರ್ಥಿಗಳು ಅರಿತುಕೊಳ್ಳಬೇಕು’ ಎಂದು ಉಲ್ಲೇಖಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.