ಮಂಗಳವಾರ, ಜನವರಿ 18, 2022
23 °C

ಪಾದಕ್ಕೆ ಎರಗುವ ಪರಿಯನ್ನು ಡಿಕೆಶಿ ನೋಡಿ ಕಲಿಯಿರಿ: ಖಂಡ್ರೆಗೆ ಬಿಜೆಪಿ ತಿರುಗೇಟು

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯದ ಬಿಜೆಪಿ ಸಂಸದರು ಗುಲಾಮರಂತೆ ವರ್ತಿಸುತ್ತಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ವ್ಯಂಗ್ಯವಾಡಿರುವುದಕ್ಕೆ ಬಿಜೆಪಿ ತೀಕ್ಷ್ಣವಾಗಿ ತಿರುಗೇಟು ನೀಡಿದೆ.

ಖಂಡ್ರೆ ಹೇಳಿಕೆ ಉಲ್ಲೇಖಿಸಿ ಟ್ವೀಟ್ ಮಾಡಿರುವ ಬಿಜೆಪಿ, ‘ನಕಲಿ ಗಾಂಧಿ ಕುಟುಂಬದ ಗುಲಾಮಗಿರಿ ನಡೆಸುವುದಕ್ಕೂ ಪೈಪೋಟಿ ಇದೆ ಖಂಡ್ರೆಯವರೇ, ಏಕೋ ನಿಮ್ಮ ವೇಗ ಕಡಿಮೆಯಾಯ್ತು! ಹೀಗಾಗಿ ಇನ್ನೂ ಕಾರ್ಯಾಧ್ಯಕ್ಷ ಸ್ಥಾನದಲ್ಲೇ ಇದ್ದೀರಿ. ಪಾದಕ್ಕೆ ಎರಗುವ ಪರಿ ಹೇಗೆಂಬುದನ್ನು ಡಿಕೆಶಿ ಅವರನ್ನು ನೋಡಿ ಕಲಿಯಿರಿ’ ಎಂದು ಉಲ್ಲೇಖಿಸಿದೆ.

ಓದಿ: ಕಲ್ಯಾಣ ಕರ್ನಾಟಕಕ್ಕೆ ಮಲತಾಯಿ ಧೋರಣೆ: ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ

‘ಗುಲಾಮಗಿರಿ ಎಂಬ ಶಬ್ದಕ್ಕೆ ಪರ್ಯಾಯ ಪದವೇ ಕಾಂಗ್ರೆಸ್. ನೆಹರು, ಇಂದಿರಾ, ರಾಜೀವ್ ಮತ್ತು ಸೋನಿಯಾ ಗಾಂಧಿಯವರ ಪದತಲದಲ್ಲಿ ಗುಲಾಮಗಿರಿ ಮಾಡಿದ್ದಕ್ಕಾಗಿಯೇ ಮುಖ್ಯಮಂತ್ರಿ ಪದವಿ ಅಲಂಕರಿಸಿದ ಮಹಾನುಭಾವರ ಪಟ್ಟಿ ಬೇಕೇ ಖಂಡ್ರೆಯವರೇ’ ಎಂದು ಮತ್ತೊಂದು ಟ್ವೀಟ್‌ನಲ್ಲಿ ಬಿಜೆಪಿ ಪ್ರಶ್ನಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು