ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಲಿತ ವರ್ಗದ ಬಗ್ಗೆ ಸಿದ್ದರಾಮಯ್ಯಗೆ ಕಿಂಚಿತ್ ಗೌರವವೂ ಇಲ್ಲ: ಬಿಜೆಪಿ

Last Updated 6 ನವೆಂಬರ್ 2021, 9:27 IST
ಅಕ್ಷರ ಗಾತ್ರ

ಬೆಂಗಳೂರು: ದಲಿತ ಸಮುದಾಯವನ್ನು ಮತಬ್ಯಾಂಕ್ ರಾಜಕಾರಣಕ್ಕೆ ಬಳಸಿಕೊಂಡ ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಆ ವರ್ಗದ ಬಗ್ಗೆ ಕಿಂಚಿತ್ ಗೌರವವೂ ಇಲ್ಲ ಎಂದು ಬಿಜೆಪಿ ಟೀಕಿಸಿದೆ.

ದಲಿತ ನಾಯಕರು ಹೊಟ್ಟೆಪಾಡಿಗಾಗಿ ಬಿಜೆಪಿಗೆ ಹೋಗಿದ್ದಾರೆ ಎಂದು ಸಿದ್ದರಾಮಯ್ಯ ನೀಡಿದ್ದಾರೆ ಎನ್ನಲಾದ ಹೇಳಿಕೆಯ ವಿಡಿಯೊವನ್ನು ಲಗತ್ತಿಸಿ ಟ್ವೀಟ್ ಮಾಡಿರುವ ಬಿಜೆಪಿ, ಪ್ರತಿಪಕ್ಷ ನಾಯಕನ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ.

‘ದಲಿತ ನಾಯಕರು ಹೊಟ್ಟೆಪಾಡಿಗಾಗಿ ಬಿಜೆಪಿಗೆ ಹೋಗಿದ್ದಾರೆಂದು ಹೇಳಿಯೇ ಇಲ್ಲ ಎನ್ನುತ್ತಿದ್ದ ಬುರುಡೆ ರಾಮಯ್ಯ (ಸಿದ್ದರಾಮಯ್ಯ ಅವರನ್ನು ಉದ್ದೇಶಿಸಿ) ಅವರೇ, ಇಲ್ಲಿ ಭಾಷಣ ಮಾಡುತ್ತಿರುವುದು ಯಾರು? ನಿಮ್ಮ ಆಂಗಿಕ ಅಭಿವ್ಯಕ್ತಿಯಲ್ಲೇ ದಲಿತ ನಾಯಕರ ಬಗ್ಗೆ ಎಷ್ಟೊಂದು ಅಸಡ್ಡೆಯಿದೆ ಎಂಬುದು ಅರ್ಥವಾಗುತ್ತಿದೆ. ದಲಿತವಿರೋಧಿ ಸಿದ್ದರಾಮಯ್ಯ ಅವರು ದಲಿತ ಸಮುದಾಯದ ಬೇಷರತ್ ಕ್ಷಮೆ ಯಾಚಿಸಬೇಕು’ ಎಂದು ಬಿಜೆಪಿ ಟ್ವೀಟ್ ಮಾಡಿದೆ.

‘ಹೊಟ್ಟೆಪಾಡಿಗಾಗಿ ಹೋಗಿರುವುದು... ಸಿದ್ದರಾಮಯ್ಯ ಅವರೇ, ಎಷ್ಟು ಸರಳವಾಗಿ ನಿಮ್ಮ ಸಮಕಾಲೀನ ದಲಿತ‌ ನಾಯಕರನ್ನು ತುಚ್ಛೀಕರಿಸಿಬಿಟ್ಟಿರಿ. ನಿಮ್ಮ ಈ ದುರಂಹಕಾರದ ನಡೆಯನ್ನು ರಾಜ್ಯದ ಸ್ವಾಭಿಮಾನಿ ದಲಿತ ಸಮುದಾಯ ಎಂದಿಗೂ ಖಂಡಿತ ಕ್ಷಮಿಸಲಾರದು. ಗೋವಿಂದ ಕಾರಜೋಳ, ರಮೇಶ್ ಜಿಗಜಿಣಗಿ ಸೇರಿದಂತೆ ಅನೇಕ ಮುಖಂಡರು ಬಿಜೆಪಿ ಸೇರಿದ್ದಾರೆ. ಅವರೆಲ್ಲರೂ ತಮ್ಮ ಸಮುದಾಯದ ಜನರ ಅಭಿವೃದ್ಧಿಗೆ ನಿರಂತರವಾಗಿ ಶ್ರಮಿಸುತ್ತಿದ್ದಾರೆ. ಆದರೆ, ದಲಿತ ಸಮುದಾಯವನ್ನು ಮತಬ್ಯಾಂಕ್ ರಾಜಕಾರಣಕ್ಕೆ ಬಳಸಿಕೊಂಡ ಸಿದ್ದರಾಮಯ್ಯ ಅವರಿಗೆ ದಲಿತ ವರ್ಗದ ಬಗ್ಗೆ ಕಿಂಚಿತ್ ಗೌರವವೂ ಇಲ್ಲ’ ಎಂದು ಬಿಜೆಪಿ ಟೀಕಿಸಿದೆ.

‘ಹತ್ತಿದ ಏಣಿ ಒದೆಯುವುದರಲ್ಲಿ ಸಿದ್ದರಾಮಯ್ಯ ನಿಸ್ಸೀಮರು. ರಾಜಕೀಯವಾಗಿ ಬೆಳೆಸಿದ ದೇವೇಗೌಡರಿಗೆ ದ್ರೋಹ ಮಾಡಿದಿರಿ. ಹೆಗಲುಕೊಟ್ಟ ಪರಮೇಶ್ವರ್ ಅವರ ಬೆನ್ನಿಗೆ ಚೂರಿ ಹಾಕಿದಿರಿ. ಜೊತೆಯಾಗಿ ಬಂದ ಮಹದೇವಪ್ಪ ಅವರನ್ನು ದೂರವಿಟ್ಟಿರಿ. ಈಗ ಜನತಾ ಪರಿವಾರದ ದಲಿತ ನಾಯಕರನ್ನೇ‌ ನಿಂದಿಸುತ್ತಿದ್ದೀರಿ’ ಎಂದು ಬಿಜೆಪಿ ಅಸಮಾಧಾನ ವ್ಯಕ್ತಪಡಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT