ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂಗಳೂರಿನಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಿಣಿ 5ಕ್ಕೆ

Last Updated 1 ನವೆಂಬರ್ 2020, 16:37 IST
ಅಕ್ಷರ ಗಾತ್ರ

ಮಂಗಳೂರು: ಬಿಜೆಪಿ ರಾಜ್ಯ ಕಾರ್ಯಕಾರಿಣಿ ಹಾಗೂ ಕೋರ್‌ ಸಮಿತಿ ಸಭೆ ಇದೇ 5ರಂದು ನಗರದ ಟಿ.ವಿ.ರಮಣ ಪೈ ಸಭಾಂಗಣದಲ್ಲಿ ನಡೆಯಲಿದೆ.

‘ರಾಜ್ಯ ಘಟಕದ ಅಧ್ಯಕ್ಷ ನಳಿನ್‌ಕುಮಾರ್‌ ಕಟೀಲ್ ಅವರು ಪೂರ್ಣ ಪ್ರಮಾಣದಲ್ಲಿ ಪದಾಧಿಕಾರಿಗಳ ತಂಡವನ್ನು ರಚಿಸಿದ ಬಳಿಕ ನಡೆಯುತ್ತಿರುವ ಮೊದಲ ಕಾರ್ಯಕಾರಿಣಿಯನ್ನು ತವರು ಜಿಲ್ಲೆಯಲ್ಲಿ ಹಮ್ಮಿಕೊಂಡಿದ್ದಾರೆ’ ಎಂದು ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಸುದರ್ಶನ ಎಂ. ಭಾನುವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಹೇಳಿದರು.

‘ರಾಜ್ಯ ಘಟಕ, ವಿವಿಧ ಮೋರ್ಚಾಗಳ, ಪ್ರಕೋಷ್ಠಗಳ, ವಿಭಾಗಗಳ ಪ್ರಮುಖರು ಸೇರಿದಂತೆ 120 ಮಂದಿ ಪಾಲ್ಗೊಳ್ಳುವ ನಿರೀಕ್ಷೆ ಇದೆ. ಅಂದು ಬೆಳಿಗ್ಗೆ 10ಗಂಟೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಉದ್ಘಾಟಿಸುವರು. ನಳಿನ್‌ಕುಮಾರ್ ಅಧ್ಯಕ್ಷತೆ ವಹಿಸಲಿದ್ದು, ಪ್ರಧಾನ ಕಾರ್ಯದರ್ಶಿ ಅರುಣಕುಮಾರ್ ಸಂಘಟಿಸುವರು. ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹಾಗೂ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್‌ ಮತ್ತು ರಾಜ್ಯದ ಕೇಂದ್ರ ಸಚಿವರು ಪಾಲ್ಗೊಳ್ಳುವರು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT