ಭಾನುವಾರ, ಮೇ 22, 2022
21 °C

ಮಸ್ಕಿ: ಫಲನೀಡದ ಬಿ.ವೈ. ವಿಜಯೇಂದ್ರ ‘ತಂತ್ರಗಾರಿಕೆ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಸ್ಕಿ: ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ‘ತಂತ್ರಗಾರಿಕೆ’ ಮಸ್ಕಿ ಕ್ಷೇತ್ರದಲ್ಲಿ ಕೆಲಸ ಮಾಡಲಿಲ್ಲ. ಬದಲಿಗೆ ‘ಹೊರಗಿನವರ ಅತಿರೇಕ’ ಕ್ಷೇತ್ರದ ಮತದಾರರ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿ, ಕಾಂಗ್ರೆಸ್‌ ಅಭ್ಯರ್ಥಿಯ ಪರ ಮತ್ತಷ್ಟು ಅನುಕಂಪ ಬರುವಂತೆ ಮಾಡಿತು ಎಂಬ ವ್ಯಾಖ್ಯಾನ ಕೇಳಿಬರುತ್ತಿದೆ.

ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ಕುಮಾರ್‌ ಕಟೀಲ್‌ ಅವರು ಈ ಕ್ಷೇತ್ರದ ಚುನಾವಣಾ ಉಸ್ತುವಾರಿಯನ್ನಾಗಿ  ವಿಜಯೇಂದ್ರ ಅವರನ್ನು ನೇಮಕ ಮಾಡಿದ್ದರು. ಬಿಜೆಪಿ ಅಭ್ಯರ್ಥಿ ಪ್ರತಾಪಗೌಡ ಪಾಟೀಲ ಅವರೂ ಸಹ ವಿಜಯೇಂದ್ರ ಅವರನ್ನೇ ತಮ್ಮ ಕ್ಷೇತ್ರಕ್ಕೆ ನೇಮಿಸಬೇಕು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ವಿನಂತಿಸಿದ್ದರು.

ತಮ್ಮ ಪಡೆಯೊಂದಿಗೆ ವಾರಕ್ಕಿಂತ ಹೆಚ್ಚುಕಾಲ ಕ್ಷೇತ್ರದಲ್ಲಿ ಬೀಡು ಬಿಟ್ಟಿದ್ದ ವಿಜಯೇಂದ್ರ ಬಿಡುವಿಲ್ಲದ ಪ್ರಚಾರ ನಡೆಸಿದ್ದರು. ಗೆಲುವು ತಮ್ಮದೇ ಎಂದು ನಂಬಿದ್ದರು.

‘ಹಾಸನ ಮತ್ತಿತರೆಡೆಯಿಂದ ಬಂದಿದ್ದ ಕಾರ್ಯಕರ್ತರು ಕ್ಷೇತ್ರದಲ್ಲಿ ಹಣ ಹಂಚುತ್ತಿದ್ದಾರೆ. ಕ್ಷೇತ್ರದ ಬಿಜೆಪಿ ಮೂಲ ಕಾರ್ಯಕರ್ತರನ್ನೂ  ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿಲ್ಲ ’ ಎಂದು ಸ್ವತಃ ಕಾಂಗ್ರೆಸ್‌ ಅಭ್ಯರ್ಥಿ ಬಸನಗೌಡ ತುರ್ವಿಹಾಳ ಆರೋಪಿದ್ದರು. 

‘ವಿಜಯೇಂದ್ರ ಉಸ್ತುವಾರಿ ವಹಿಸಿಕೊಂಡ ಕ್ಷೇತ್ರಗಳಲ್ಲಿ ಅವರ ಅಭ್ಯರ್ಥಿಯದ್ದೇ ಜಯ’ ಎಂಬ ಮಾತು ಈಗ ಇಲ್ಲಿ ಸುಳ್ಳಾಗಿದೆ ಎಂದು ಅವರ ಪಕ್ಷದವರು ಬೇಸರದಿಂದ ಹೇಳುತ್ತಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು