ಶನಿವಾರ, ಅಕ್ಟೋಬರ್ 1, 2022
20 °C

ಬಿಜೆಪಿಯಿಂದ ರಾಜ್ಯದ ವಿವಿಧೆಡೆ ಬೃಹತ್ ಜನೋತ್ಸವ: ಎಂ.ಜಿ.ಮಹೇಶ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಸೆಪ್ಟೆಂಬರ್ ಮೊದಲ ವಾರದಿಂದ ಅಕ್ಟೋಬರ್‌ ಎರಡನೇ ವಾರದವರೆಗೆ ರಾಜ್ಯದ ವಿವಿಧೆಡೆ ೭ ಬೃಹತ್ ಜನೋತ್ಸವ ನಡೆಸಲು ತೀರ್ಮಾನಿಸಲಾಗಿದೆ ಎಂದು ಬಿಜೆಪಿ ವಕ್ತಾರ ಎಂ.ಜಿ.ಮಹೇಶ್ ತಿಳಿಸಿದರು.

ರಾಜ್ಯ ಬಿಜೆಪಿ ಪದಾಧಿಕಾರಿಗಳ ಸಭೆಯ ಉದ್ಘಾಟನೆ ಬಳಿಕ ಅವರು ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು.

ಅಲ್ಲದೆ, ಬಿಜೆಪಿ ದುರ್ಬಲವಾಗಿರು ೧೦೦ ವಿಧಾಸಸಭಾ ಕ್ಷೇತ್ರಗಳಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಲಾ ೫೦ ಕ್ಷೇತ್ರಗಳಲ್ಲಿ ಪ್ರತ್ಯೇಕ ತಂಡಗಳಲ್ಲಿ ಪ್ರವಾಸ ಮಾಡಲಿದ್ದು, ಇವುಗಳ ದಿನಾಂಕ ಸಂಜೆ ವೇಳೆಗೆ‌ ನಿರ್ಧಾರವಾಗಲಿದೆ ಎಂದು ಅವರು ಹೇಳಿದರು.

ಸೆಪ್ಟೆಂಬರ್ ೧೦ ಮತ್ತು ೧೧ ರಂದು ಬೆಂಗಳೂರಿನಲ್ಲಿ ಪಕ್ಷದ ರಾಜ್ಯ ಕಾರ್ಯಕಾರಿಣಿ ನಡೆಸಲು ತೀರ್ಮಾನಿಸಲಾಗಿದೆ ಎಂದರು.

ರಾಜ್ಯ ಪದಾಧಿಕಾರಿಗಳು ಪ್ರತಿ ೧೫ ದಿನಗಳಿಗೆ ವಿವಿಧ ಕ್ಷೇತ್ರಗಳಿಗೆ ಪ್ರವಾಸ ಮಾಡುವಂತೆಯೂ ಸೂಚಿಸಲಾಗಿದೆ ಎಂದರು.

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ೧೪೫ ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲು ಮುಖ್ಯಮಂತ್ರಿ ಬೊಮ್ಮಾಯಿ ನೇತೃತ್ವದಲ್ಲಿ ಸರ್ಕಾರದ ಕಾರ್ಯಗಳನ್ನು ಮನೆ ಮನೆಗೆ ತಲುಪಿಸುವ ಕಾರ್ಯಯೋಜನೆ ಹಮ್ಮಿಕೊಳ್ಳಲಾಗಿದೆ. ಇದರ ಜವಾಬ್ದಾರಿ ಪದಾಧಿಕಾರಿಗಳಿಗೆ ವಹಿಸಲಾಗಿದೆ ಎಂದರು.

ಕಾಂಗ್ರೆಸ್ ಪಕ್ಷ ಒಂದು ವರ್ಗವನ್ನು ಓಲೈಸಲು ಸ್ವಾತಂತ್ರ್ಯ ಹೋರಾಟಗಾರ ಸಾವರ್ಕರ್ ಅವರನ್ನು ಹೀಗಳೆಯುತ್ತಿದೆ. ಇದು ಖಂಡನೀಯ ಎಂಬ ಅಭಿಪ್ರಾಯ ಸಭೆಯಲ್ಲಿ ವ್ಯಕ್ತವಾಯಿತು ಎಂದು ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು