ಶುಕ್ರವಾರ, ಮೇ 27, 2022
26 °C
ಬಿಜೆಪಿ ಬೆಂಗಳೂರು ದಕ್ಷಿಣ ಜಿಲ್ಲಾ ಘಟಕದ ಕಾರ್ಯಕಾರಿಣಿ ಸಭೆ

ಸಾಮಾನ್ಯ ಕಾರ್ಯಕರ್ತರಿಗೂ ಉನ್ನತ ಸ್ಥಾನ: ಸಚಿವ ವಿ.ಸೋಮಣ್ಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ‘ಜಗತ್ತಿನಲ್ಲೇ ಅತಿ ಹೆಚ್ಚು ಸದಸ್ಯರನ್ನು ಹೊಂದಿರುವ ಪಕ್ಷ ಬಿಜೆಪಿ. ನಮ್ಮಲ್ಲಿ ಸಾಮಾನ್ಯ ಕಾರ್ಯಕರ್ತರಿಗೂ ಉನ್ನತ ಸ್ಥಾನಮಾನ ಲಭಿಸುತ್ತದೆ. ಈ ಪಕ್ಷದ ಸದಸ್ಯತ್ವ ಹೊಂದುವುದು ಹೆಮ್ಮೆಯ ಸಂಗತಿ’ ಎಂದು ವಸತಿ ಸಚಿವ ವಿ.ಸೋಮಣ್ಣ ಹೇಳಿದರು.

ಪಕ್ಷದ ಬೆಂಗಳೂರು ದಕ್ಷಿಣ ಜಿಲ್ಲಾ ಘಟಕದ ಕಾರ್ಯಕಾರಿಣಿ ಸಭೆಯಲ್ಲಿ ಶನಿವಾರ ಅವರು ಮಾತನಾಡಿದರು.

‘ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಬೀದಿ ದೀಪ, ಉದ್ಯಾನ, ರಸ್ತೆ, ಕೊಳವೆಬಾವಿಯಂತಹ ಮೂಲಸೌಕರ್ಯ ಬೇಡಿಕೆಗಳ ಸಮಗ್ರ ಮಾಹಿತಿ ಸಂಗ್ರಹಿಸಿದ್ದೇವೆ. ಜನರ ಅಹವಾಲುಗಳನ್ನು ಬಗೆಹರಿಸಲು ವಾರ್ ರೂಂಗಳನ್ನು ರೂಪಿಸಲಾಗಿದೆ’ ಎಂದರು.

‘ಪ್ರಧಾನಿ ನರೇಂದ್ರ ಮೋದಿಯವರ ಆಡಳಿತದಲ್ಲಿ ಸರ್ವರಿಗೂ ಸಮಪಾಲು ತತ್ವವನ್ನು ಪಾಲಿಸಲಾಗುತ್ತಿದೆ. ಉಜ್ವಲ, ಮುದ್ರಾ ಯೋಜನೆಗಳು ಕೊಟ್ಯಂತರ ಜನರನ್ನು ತಲುಪಿವೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬೆಂಗಳೂರು ಅಭಿವೃದ್ಧಿಗೆ
₹6 ಸಾವಿರ ಕೋಟಿ ಅನುದಾನ ನೀಡಿದ್ದಾರೆ. ಸಮಾಜ ಕಟ್ಟಕಡೆಯ ವ್ಯಕ್ತಿಗೂ ಕೇಂದ್ರ ಮತ್ತು ರಾಜ್ಯ ಸರ್ಕಾರದ ಅಭಿವೃದ್ಧಿ ಯೋಜನೆಗಳ ಪ್ರಯೋಜನ ಸಿಗುತ್ತಿದೆ’ ಎಂದರು. 

ಬೆಂಗಳೂರು ದಕ್ಷಿಣ ಜಿಲ್ಲಾ ಘಟಕದ ಅಧ್ಯಕ್ಷ ಎನ್.ರಮೇಶ್, ‘ಇದೇ 21ರಂದು 13 ಮಂಡಲ, 19 ಪ್ರಕೋಷ್ಟಗಳ ಸಮಾವೇಶ ಆಯೋಜಿಸಲಾಗಿದೆ. ಮೇ 25ರಿಂದ ಜೂನ್ 10ರವರಗೆ ಪ್ರತಿ ಮಂಡಲದಲ್ಲೂ ಕಾರ್ಯಕಾರಿಣಿ ಆಯೋಜಿಸಬೇಕು’ ಎಂದರು.

ಶಾಸಕರಾದ ರವಿ ಸುಬ್ರಹ್ಮಣ್ಯ, ಉದಯ ಗರುಡಾಚಾರ್, ಸಂಜೀವ ಮಠಂದೂರು, ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ, ಪಕ್ಷದ ಗೋವಿಂದರಾಜನಗರ ಮಂಡಲ ಅಧ್ಯಕ್ಷ ವಿಶ್ವನಾಥ ಗೌಡ, ವಿಜಯನಗರ ಮಂಡಲ ಘಟಕದ ಅಧ್ಯಕ್ಷ ಟಿ.ವಿ.ಕೃಷ್ಣ, ಮುಖಂಡರಾದ ಕೆ.ಉಮೇಶ್ ಶೆಟ್ಟಿ, ಡಾ.ಎಸ್.ರಾಜು, ಮೋಹನ್ ಕುಮಾರ್, ವಾಗೇಶ್ ದೊಡ್ಡವೀರಯ್ಯ ಹಾಗೂ ಶ್ರೀಧರ್ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು