ಶುಕ್ರವಾರ, ಅಕ್ಟೋಬರ್ 22, 2021
29 °C

ಬಿಎಸ್‌ವೈ ಅವರನ್ನು ರಾಜಕೀಯವಾಗಿ ಮುಗಿಸಲು ಬಿಜೆಪಿಯಿಂದ 2ನೇ ಹೆಜ್ಜೆ: ಕಾಂಗ್ರೆಸ್‌ 

ಪ್ರಜಾವಾಣಿ ವೆಬ್‌ಡೆಸ್ಕ್‌ Updated:

ಅಕ್ಷರ ಗಾತ್ರ : | |

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಅವರನ್ನು ರಾಜಕೀಯವಾಗಿ ಸರ್ವನಾಶ ಮಾಡಲು ಬಿಜೆಪಿ ಹೆಜ್ಜೆ ಇಟ್ಟಿದೆ ಎಂದು ಕರ್ನಾಟಕ ಕಾಂಗ್ರೆಸ್‌ ಹೇಳಿದೆ. 

ಈ ಬಗ್ಗೆ ಶನಿವಾರ ಕಾಂಗ್ರೆಸ್‌ನ ಅಧಿಕೃತ ಟ್ವಿಟರ್‌ ಖಾತೆಯ ಮೂಲಕ ಟ್ವೀಟ್‌ ಮಾಡಲಾಗಿದೆ. 

‘ಯಡಿಯೂರಪ್ಪ ನೇತೃತ್ವದಲ್ಲಿಯೇ ಮುಂದಿನ ಚುನಾವಣೆ ಎನ್ನುತ್ತಿದ್ದ ಬಿಜೆಪಿಗರು ಈಗ ಬೊಮ್ಮಾಯಿ ಅವರ ನೇತೃತ್ವದಲ್ಲಿ ಎನ್ನುತ್ತಿದ್ದಾರೆ. ಕಣ್ಣೀರು ಹಾಕಿಸಿ ಯಡಿಯೂರಪ್ಪ ಅವರ ಅಧಿಕಾರ ಕಿತ್ತುಕೊಂಡ ಬಿಜೆಪಿ, ಈಗ ಅವರ ಆಪ್ತರನ್ನೇ ಟಾರ್ಗೆಟ್ ಮಾಡಿ ಐಟಿ ರೈಡ್ ಮಾಡಿಸಿದೆ,‘ ಎಂದು ಆರೋಪಿಸಿದೆ. 

ಐಟಿ ದಾಳಿಯು ಬಿಎಸ್‌ವೈ ಅವರನ್ನು ರಾಜಕೀಯವಾಗಿ ಸರ್ವನಾಶ ಮಾಡಲು ಬಿಜೆಪಿ ಇಟ್ಟ ಎರಡನೇ ಹೆಜ್ಜೆ ಎಂದು ಕಾಂಗ್ರೆಸ್‌ ಹೇಳಿದೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು