ಬಿಟ್‌ಕಾಯಿನ್ ಆರೋಪಿಯ ಆಪ್ತರೆನ್ನಲಾದವರ ಜೊತೆ ರಾಕೇಶ್ ಸಿದ್ದರಾಮಯ್ಯ: ಬಿಜೆಪಿ

ಬೆಂಗಳೂರು: ಬಿಟ್‌ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಬಿಜೆಪಿ ಟ್ವೀಟ್ ಮೂಲಕ ತಿರುಗೇಟು ನೀಡಿದೆ. ಸಿದ್ದರಾಮಯ್ಯ ಅವರ ಮಗನನ್ನೇ ಬಿಜೆಪಿ ಪ್ರಕರಣಕ್ಕೆ ಎಳೆದು ತಂದಿದೆ.
ಸಿದ್ದರಾಮಯ್ಯನವರ ಪುತ್ರ, ದಿವಂಗತ ರಾಕೇಶ್ ಸಿದ್ದರಾಮಯ್ಯನವರು ಬಿಟ್‌ಕಾಯಿನ್ ಪ್ರಕರಣದ ಆರೋಪಿ ಶ್ರೀಕೃಷ್ಣ ಅವರ ಆಪ್ತರೆನ್ನಲಾದವರ ಜೊತೆ ತೆಗೆಸಿಕೊಂಡಿರುವ ರುವ ಫೋಟೊವನ್ನು ಟ್ವೀಟ್ ಬಿಜೆಪಿ ಟ್ವಿಟ್ ಮಾಡಿದೆ.
ಮಾನ್ಯ ಸಿದ್ದರಾಮಯ್ಯನವರೇ, ಬೆಂಗಳೂರಿನ ಪ್ರತಿಷ್ಠಿತ ಹೊಟೇಲ್‌ನಲ್ಲಿ ನಡೆಯುತ್ತಿದ್ದ ಹುಕ್ಕಾ ಬಾರ್, ಬಿಟ್‌ಕಾಯಿನ್ ಸೇರಿದಂತೆ ಆ ಎಲ್ಲ ಚಟುವಟಿಕೆಯ ಕೇಂದ್ರವಾಗಿತ್ತು. ಸುನೀಶ್ ಹೆಗ್ಡೆ, ಹೇಮಂತ್ ಮುದ್ದಪ್ಪ, ಶ್ರೀಕಿಯಂಥವರು ಆಗ ನಿಮ್ಮ ಮನೆಯ ಸುತ್ತಮುತ್ತಲೂ ಓಡಾಡಿರಲೂಬಹುದಲ್ಲವೇ!? ಎಂದು ಬಿಜೆಪಿ ಪ್ರಶ್ನಿಸಿದೆ.
ಮಾನ್ಯ ಸಿದ್ದರಾಮಯ್ಯನವರೇ,
√ ಬೆಂಗಳೂರಿನ ಪ್ರತಿಷ್ಠಿತ ಹೊಟೇಲ್‌ನಲ್ಲಿ ನಡೆಯುತ್ತಿದ್ದ ಹುಕ್ಕಾ ಬಾರ್ ಆ ಎಲ್ಲ ಚಟುವಟಿಕೆಯ ಕೇಂದ್ರವಾಗಿತ್ತು.
√ ಸುನೀಶ್ ಹೆಗ್ಡೆ, ಹೇಮಂತ್ ಮುದ್ದಪ್ಪ, ಶ್ರೀಕಿಯಂಥವರು ಆಗ ನಿಮ್ಮ ಮನೆಯ ಸುತ್ತಮುತ್ತಲೂ ಓಡಾಡಿರಲೂ ಬಹುದಲ್ಲವೇ!?
— BJP Karnataka (@BJP4Karnataka) November 18, 2021
ಬಿಟ್ ಕಾಯಿನ್ ಹ್ಯಾಕರ್ ಶ್ರೀಕಿ ಜೊತೆಗೆ ಹೇಮಂತ್ ಮುದ್ದಪ್ಪ ಹಾಗೂ ಸುನೀಶ್ ಹೆಗ್ಡೆ ಗಾಢ ಸ್ನೇಹ ಹೊಂದಿದ್ದರು. ಶ್ರೀಕಿ ಮೂಲಕ ಗೇಮಿಂಗ್ ಸೈಟ್ ಮತ್ತು ಇ-ಪೋರ್ಟಲ್ ಹ್ಯಾಕ್ ಮಾಡಿಸಿದ್ದರು ಎಂಬುದು ಪೊಲೀಸ್ ದಾಖಲೆಯಲ್ಲಿದೆ!? ಇಲ್ಲಿ ನೋಡಿ, ಸುನೀಶ್ ಹೆಗ್ಡೆ ಮತ್ತು ಹೇಮಂತ್ ಯಾರ ಜೊತೆಗಿದ್ದಾರೆ ಎಂದು ಒಮ್ಮೆ ನೋಡಿ ಎಂದು ಬಿಜೆಪಿ ಪ್ರಶ್ನಿಸಿದೆ.
ಈ ಚಿತ್ರದಲ್ಲಿರುವ ಸುನೀಶ್ ಹೆಗ್ಡೆ & ಹೇಮಂತ್ ಜೊತೆಗಿರುವ ಎಲ್ಲರನ್ನು ನೀವು ಗುರುತಿಸಬಲ್ಲಿರಿ ಎಂಬುದು ನಮ್ಮ ನಂಬಿಕೆ.ಆ ನಂಬಿಕೆ ನಿಜವೇ ಆದರೆ #Bitcoin ಹ್ಯಾಕಿಂಗ್ ದಂಧೆ ನಿಮ್ಮ ಕಾಲದಲ್ಲೇ ಆರಂಭವಾಗಿತ್ತು. ಸಿದ್ದರಾಮಯ್ಯನವರೇ, ಆ ಬಗ್ಗೆ ನೀವು ಸ್ಪಷ್ಟ ಮಾಹಿತಿ ಹೊಂದಿದ್ದೀರಿ ಅಲ್ಲವೇ? ಎಂದು ಬಿಜೆಪಿ ಪ್ರಶ್ನಿಸಿದೆ.
ಸಿದ್ದರಾಮಯ್ಯನವರೇ, ಡ್ರಗ್ಸ್ ಹಾಗೂ ಬಿಟ್ ಕಾಯಿನ್ ಅವ್ಯವಹಾರ ಬಹಿರಂಗವಾಗಿದ್ದು ನಿಮ್ಮ ಕಾಲದಲ್ಲಿ. ಒಂದೆರಡು ಕಡೆ ದಾಳಿ ನಡೆದರೂ ತನಿಖೆ ಹಠಾತ್ ಸ್ಥಗಿತಗೊಂಡಿತ್ತು. ಬಿಟ್ ಕಾಯಿನ್ ಹಗರಣದಲ್ಲಿ ಪ್ರಭಾವಿಗಳು ಇದ್ದಾರೆ ಎಂದು ಸಿದ್ದರಾಮಯ್ಯ ಅವರು ಆರೋಪಿಸಿದ್ದರು. ಆದರೆ ಈಗ ದಾಖಲೆಯೇ ಇಲ್ಲ ಎನ್ನುತ್ತಿದ್ದಾರೆ ಎಂದು ಬಿಜೆಪಿ ಕೇಳಿದೆ.
ಮಾನ್ಯ ಸಿದ್ದರಾಮಯ್ಯನವರೇ,
√ ಡ್ರಗ್ಸ್ ಹಾಗೂ ಬಿಟ್ ಕಾಯಿನ್ ಅವ್ಯವಹಾರ ಬಹಿರಂಗವಾಗಿದ್ದು ನಿಮ್ಮ ಕಾಲದಲ್ಲಿ.
√ ಒಂದೆರಡು ಕಡೆ ದಾಳಿ ನಡೆದರೂ ತನಿಖೆ ಹಠಾತ್ ಸ್ಥಗಿತಗೊಂಡಿತು.
— BJP Karnataka (@BJP4Karnataka) November 18, 2021
ಮಾನ್ಯ #Bitcoinಬುರುಡೆರಾಮಯ್ಯ, ನಿಮ್ಮ ಅವಧಿಯಲ್ಲಿ ನಡೆದ ಈ ಹಗರಣವನ್ನು ಮುಚ್ಚಿ ಹಾಕುವುದು ನಿಮಗೆ ತೀರಾ ಅನಿವಾರ್ಯವಾಗಿತ್ತು. ಅಪ್ರಿಯವಾದ ಸತ್ಯ ಹೇಳುತ್ತೇವೆ, ಇಲ್ಲಿ ನಿಮ್ಮ ಅತ್ಯಾಪ್ತರೇ ಇದ್ದರು ಎಂಬ ಅನುಮಾನಕ್ಕೆ ಈ ಚಿತ್ರ ಪುಷ್ಠಿ ನೀಡುತ್ತಿದೆ. ಸತ್ಯ ಅನಾವರಣವಾಗುವ ಭಯಕ್ಕೆ ನೀವು #UTurn ತೆಗೆದುಕೊಳ್ಳುತ್ತಿದ್ದೀರಿ ಅಲ್ಲವೇ? ಎಂದು ಬಿಜೆಪಿ ಪ್ರಶ್ನಿಸಿದೆ.
ಮುಳುಗುತ್ತಿರುವವನಿಗೆ ಹುಲ್ಲುಕಡ್ಡಿ ಆಸರೆ ಎಂಬಂತೆ ತಮ್ಮ ನಾಯಕತ್ವ ದುರ್ಬಲವಾಗುತ್ತಿರುವ ಸಂದರ್ಭದಲ್ಲಿ ಸಿದ್ದರಾಮಯ್ಯ ಅವರಿಗೆ #Bitcoin ಆಸರೆಯಾಗಿದೆ. ಆದರೆ, ಒಂದು ಚಿತ್ರ ಸಾವಿರ ಕತೆ ಹೇಳುತ್ತದೆ. ಮತ್ತೊಮ್ಮೆ ಆಗ್ರಹ ಈ ಚಿತ್ರದಲ್ಲಿರುವ ವ್ಯಕ್ತಿಗಳನ್ನು ಗುರುತಿಸಿ ಎಂದು ಬಿಜೆಪಿ ಒತ್ತಾಯಿಸಿದೆ.
ಮುಳುಗುತ್ತಿರುವವನಿಗೆ ಹುಲ್ಲುಕಡ್ಡಿ ಆಸರೆ ಎಂಬಂತೆ ತಮ್ಮ ನಾಯಕತ್ವ ದುರ್ಬಲವಾಗುತ್ತಿರುವ ಸಂದರ್ಭದಲ್ಲಿ ಸಿದ್ದರಾಮಯ್ಯ ಅವರಿಗೆ #Bitcoin ಆಸರೆಯಾಗಿದೆ.
ಆದರೆ, ಒಂದು ಚಿತ್ರ ಸಾವಿರ ಕತೆ ಹೇಳುತ್ತದೆ. ಮತ್ತೊಮ್ಮೆ ಆಗ್ರಹ ಈ ಚಿತ್ರದಲ್ಲಿರುವ ವ್ಯಕ್ತಿಗಳನ್ನು ಗುರುತಿಸಿ.
8/n#Bitcoinಬುರುಡೆರಾಮಯ್ಯ pic.twitter.com/Rieraf3yhP
— BJP Karnataka (@BJP4Karnataka) November 18, 2021
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.