ಬುಧವಾರ, ಸೆಪ್ಟೆಂಬರ್ 30, 2020
22 °C

ವಿಜಯೇಂದ್ರ ವಿರುದ್ಧ ಆರೋಪ; ಕೆಪಿಸಿಸಿ ವಕ್ತಾರನ ವಿರುದ್ಧ ಎಫ್‌ಐಆರ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ವಿಜಯೇಂದ್ರ ವಿರುದ್ಧ ಸುಳ್ಳು ಆರೋಪ ಮಾಡಿರುವ ಕೆಪಿಸಿಸಿ ವಕ್ತಾರ್ ಎಂ. ಲಕ್ಷ್ಮಣ, ಬಿಜೆಪಿ ಶಾಸಕರ ನಕಲಿ ಸಹಿ ಬಳಸಿ ಖೊಟ್ಟಿ ದಾಖಲೆ ಬಿಡುಗಡೆ ಮಾಡಿದ್ದಾರೆ’ ಎಂದು ಆರೋಪಿಸಿ ವಕೀಲ ಜಿ. ದೇವೇಗೌಡ ಎಂಬುವರು ವಿಧಾನಸೌಧ ಠಾಣೆಗೆ ದೂರು ನೀಡಿದ್ದಾರೆ.

‘ದೇವೇಗೌಡ ಅವರು ನೀಡಿರುವ ದೂರು ಆಧರಿಸಿ ಆರೋಪಿ ಲಕ್ಷ್ಮಣ ವಿರುದ್ಧ ಎಫ್‌ಐಆರ್‌ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸರು ಹೇಳಿದರು.

‘ಮೈಸೂರಿನ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಆ. 26ರಂದು ಪತ್ರಿಕಾಗೋಷ್ಠಿ ನಡೆಸಿದ್ದ ಲಕ್ಷ್ಮಣ, ‘ಸೂಪರ್ ಸಿಎಂ ಬಿ.ವೈ. ವಿಜಯೇಂದ್ರ ದರ್ಬಾರ್’ ಎಂಬ ದಾಖಲೆ ಬಿಡುಗಡೆ ಮಾಡಿದ್ದರು. ಅದರಲ್ಲಿ ಬಿಜೆಪಿ ಶಾಸಕರು ಸಹಿ ಮಾಡಿ, ಹೈಕಮಾಂಡ್‌ಗೆ ದೂರು ನೀಡಿರುವುದಾಗಿ ಹೇಳಿದ್ದರು. ಇದು ಸುಳ್ಳು ದಾಖಲೆ ಎಂಬುದಾಗಿ ದೇವೇಗೌಡ ದೂರಿದ್ದಾರೆ.’

’ಸುಳ್ಳು ದಾಖಲೆ ಮೂಲಕ ವಿಜಯೇಂದ್ರ ಮತ್ತು ಬಿಜೆಪಿ ಪಕ್ಷದ ಗೌರವಕ್ಕೆ ಧಕ್ಕೆ ಉಂಟು ಮಾಡಲಾಗಿದೆ. ಆರೋಪಿ ಲಕ್ಷ್ಮಣ ವಿರುದ್ಧ ಕ್ರಮ ಕೈಗೊಳ್ಳುವಂತೆಯೂ ದೇವೇಗೌಡ ಆಗ್ರಹಿಸಿದ್ದಾರೆ’ ಎಂದೂ ಪೊಲೀಸರು ಹೇಳಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು