ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಮೀಸಲಾತಿ, ಉದ್ಯೋಗ ನಾಶವೇ ಬಿಜೆಪಿ ಗುರಿ’–ಮಲ್ಲಿಕಾರ್ಜುನ ಖರ್ಗೆ

Last Updated 21 ಮೇ 2022, 18:40 IST
ಅಕ್ಷರ ಗಾತ್ರ

ಬೆಂಗಳೂರು: ‘ಬಡವರು, ಶೋಷಿತರಿಗೆ ಆಸರೆಯಾಗಿರುವ ಮೀಸಲಾತಿ ಹಾಗೂ ಸಾರ್ವಜನಿಕ ವಲಯದ ಉದ್ಯೋಗಗಳ ನಾಶದ ಗುರಿಯೊಂದಿಗೆ ಬಿಜೆಪಿ ರಾಜಕಾರಣ ಮಾಡುತ್ತಿದೆ’ ಎಂದು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದರು.

ಕೆಪಿಸಿಸಿ ಕಚೇರಿಯಲ್ಲಿ ಶನಿವಾರ ಮಾಜಿ ಪ್ರಧಾನಿ ರಾಜೀವ್‌ ಗಾಂಧಿ ಅವರ ಸ್ಮರಣೆ ಕಾರ್ಯಕ್ರಮದಲ್ಲಿ ರಾಜೀವ್‌ ಗಾಂಧಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದ ಅವರು, ‘ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಮೀಸಲಾತಿಯ ವಿರುದ್ಧ ಇದೆ. ಈ ಕಾರಣಕ್ಕಾಗಿಯೇ ಸರ್ಕಾರಿ ವಲಯದ 26 ಲಕ್ಷ ಹುದ್ದೆಗಳನ್ನು ಭರ್ತಿ ಮಾಡಿಲ್ಲ’ ಎಂದು ಆರೋಪಿಸಿದರು.

ಬಿಜೆಪಿ ಸರ್ಕಾರದ ಸ್ವಂತದ ಸಾಧನೆ ಏನೂ ಇಲ್ಲ. ಕಾಂಗ್ರೆಸ್‌ ಅವಧಿಯಲ್ಲಿನ ಯೋಜನೆಗಳ ಹೆಸರು ಬದಲಿಸಿದ್ದೇ ಸಾಧನೆ. ಕಾಂಗ್ರೆಸ್‌ ಆಡಳಿತದಲ್ಲಿ ಕಟ್ಟಿ ಬೆಳೆಸಿದ್ದ ಬಿಎಸ್‌ಎನ್‌ಎಲ್‌ ಮತ್ತಿತರ ಸಾರ್ವಜನಿಕ ಉದ್ದಿಮೆಗಳನ್ನು ಮಾರಾಟ ಮಾಡಿದ್ದೇ ಸಾಧನೆ’ ಎಂದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾ ರೆಡ್ಡಿ ಮಾತನಾಡಿ, ‘ರಾಜೀವ್‌ ಗಾಂಧಿಯವರ ದೂರದೃಷ್ಟಿಯ ಫಲವಾಗಿ ದೇಶ ತಂತ್ರಜ್ಞಾನ ಕ್ಷೇತ್ರದಲ್ಲಿ ಪ್ರಬಲವಾಗಿ ಬೆಳೆದಿದೆ. ಈಗಿನ ಬಿಜೆಪಿ ಸರ್ಕಾರ ಧರ್ಮದ ಹೆಸರಿನಲ್ಲಿ ದ್ವೇಷ ಹರಡುವುದಕ್ಕೆ ಸೀಮಿತವಾಗಿದೆ’ ಎಂದರು.

ವಿಧಾನಸಭೆ ವಿರೋಧ ಪಕ್ಷದ ಉಪ ನಾಯಕ ಯು.ಟಿ.ಖಾದರ್, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್‌, ಶಾಸಕ ದಿನೇಶ್ ಗುಂಡೂರಾವ್‌, ಮೇಲ್ಮನೆ ಸದಸ್ಯ ಅಲ್ಲಂ ವೀರಭದ್ರಪ್ಪ, ಮುಖಂಡರಾದ ಎಚ್.ಆಂಜನೇಯ ಕಾರ್ಯಕ್ರಮದಲ್ಲಿ ಮಾತನಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT